ಉಡುಪಿ: ಉಡುಪಿ ಜಿಲ್ಲಾ ಪಂಚಾಯತ್ ಡಾll ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಸಚಿವರಾದ ವಿ. ಸುನೀಲ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಕೋವಿಡ್ - 19 ನಿರ್ವಹಣೆ ಹಾಗೂ ನೆರೆ ಹಾವಳಿ ಪರಿಹಾರ ಕೆಲಸಗಳನ್ನು ತ್ವರಿತವಾಗಿ ಪರಿಶೀಲನೆ ಮಾಡುವ ಸಭೆ ನಡೆಯಿತು.
ಸಭೆಯಲ್ಲಿ ಕೋವಿಡ್ ಪಾಸಿಟಿವ್ ಬಂದವರನ್ನು ಕೋವಿಡ್ ಕೇರ್ ಸೆಂಟರ್ ಗೆ ಸ್ಥಳಾಂತರಿಸುವುದು ಹಾಗೂ 100 ಮೀಟರ್ ಒಳಗೆ 5 ಕ್ಕಿಂತ ಹೆಚ್ಚು ಸಕ್ರೀಯ ಪ್ರಕರಣಗಳಿದ್ದರೆ ಆ ಭಾಗವನ್ನು ಕಂಟೈನ್ ಮೆಂಟ್ ಜೋನ್ ಎಂದು ಪರಿಗಣಿಸುವ ಬಗ್ಗೆ ನಿರ್ಣಯಿಸಲಾಯಿತು.
ಈ ಸಂದರ್ಭದಲ್ಲಿ ಶಾಸಕ ರಘುಪತಿ ಭಟ್ ,ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಲಾಲಾಜಿ ಆರ್ ಮೆಂಡನ್, ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಸುಕುಮಾರ್ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ ಹಾಗೂ ಜಿಲ್ಲಾಧಿಕಾರಿಗಳಾದ ಜಿ ಜಗದೀಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ನವೀನ್ ಭಟ್ ವೈ, ಪೋಲಿಸ್ ವರಿಷ್ಠಾಧಿಕಾರಿಗಳಾದ ಎನ್ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿಗಳಾದ ಸದಾಶಿವ ಪ್ರಭು, ಸಹಾಯಕ ಆಯುಕ್ತರಾದ ರಾಜು ಕೆ, ಜಿಲ್ಲಾ ಆರೋಗ್ಯಾಧಿಕಾರಿಗಳಾದ ನಾಗಭೂಷಣ್ ಉಡುಪ, ಜಿಲ್ಲಾ ಶಸ್ತ್ರಚಿಕಿತ್ಸಕರಾದ ಮಧುಸೂದನ್ ನಾಯಕ್, ಕೋವಿಡ್ ನೋಡಲ್ ಅಧಿಕಾರಿಗಳಾದ ಪ್ರಶಾಂತ್ ಭಟ್, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
07/08/2021 01:45 pm