ಬಂಟ್ವಾಳ: ತನಗೆ ವಹಿಸಿಕೊಟ್ಟ ಇಂಧನ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಹೊಸತನದ ಸ್ಪರ್ಶ ನೀಡುವ ಮೂಲಕ ಕೆಲಸ ಮಾಡುತ್ತೇನೆ ಎಂದು ಸೋಮವಾರ ಬೆಳಗ್ಗೆ ಬಂಟ್ವಾಳ ತಾಲೂಕಿನ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ಸಚಿವ ಸುನಿಲ್ ಕುಮಾರ್ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.
ಮುಂದಿನ ಶುಕ್ರವಾರ ತಾನು ಸಚಿವನಾಗಿ ಅಧಿಕಾರ ವಹಿಸಿಕೊಳ್ಳುವುದಕ್ಕೆ ಪೂರ್ವಭಾವಿಯಾಗಿ ದೇವಸ್ಥಾನಕ್ಕೆ ಭೇಟಿ ನೀಡಿರುವುದಾಗಿ ಅವರು ತಿಳಿಸಿದರು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು , ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ದೇವಳದ ಕಾರ್ಯನಿರ್ವಣಾಧಿಕಾರಿ ಪಿ.ಜಯಮ್ಮ,ಆಡಳಿತ ಮೊಕ್ತೇಸರ ಡಾ. ಮಂಜಯ್ಯ ಶೆಟ್ಟಿ ಅಮ್ಮುಂಜೆ ಗುತ್ತು, ಯು.ತಾರನಾಥ ಆಳ್ವ, ಚೇರ ಸೂರ್ಯನಾರಾಯಣ ರಾವ್, ಪಿ.ಮಾದವ ಭಟ್, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಗಿರಿಪ್ರಕಾಶ್ ತಂತ್ರಿ, ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ, ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಪ್ರಮುಖರಾದ ವೆಂಕಟೇಶ ನಾವುಡ, ಯಶವಂತ ಫೊಳಲಿ, ನಂದರಾಮ ರೈ, ಪುರುಷೋತ್ತಮ ಶೆಟ್ಟಿ, ಪುಷ್ಪರಾಜ್ ಚೌಟ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
09/08/2021 12:59 pm