ಉಡುಪಿ: ದೇಶಾದ್ಯಂತ ಕಾರ್ಮಿಕ ಸಂಘಟನೆಗಳು 13 ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆಗೆ ಕರೆ ನೀಡಿದ್ದು, ಅದಕ್ಕೆ ಬೆಂಬಲ ಸೂಚಿಸಿ ಉಡುಪಿಯಲ್ಲಿ ಕಾರ್ಮಿಕ ಸಂಘಟನೆಗಳಾದ ಸಿಐಟಿಯು, ಎಐಕೆಎಸ್ ಜಂಟಿಯಾಗಿ ಇವತ್ತು ಪ್ರತಿಭಟನೆ ನಡೆಸಿತು.
ಬೆಳಿಗ್ಗೆ ಉಡುಪಿಯ ಬನ್ನಂಜೆಯಲ್ಲಿರುವ ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಕೇಂದ್ರ, ರಾಜ್ಯ ಸರಕಾರಗಳ ವಿರುದ್ಧ ಘೋಷಣೆ ಕೂಗಿದರು.ಮುಖ್ಯವಾಗಿ ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ಸಂಹಿತೆಗಳು ಹಾಗೂ ಜನವಿರೋಧಿ ಕೃಷಿ ಕಾನೂನುಗಳು ಮತ್ತು ವಿದ್ಯುತ್ ತಿದ್ದುಪಡಿಯನ್ನು ರದ್ದುಪಡಿಸಬೇಕು.
ರೈತರ ಎಲ್ಲ ಬೆಳೆಗಳಿಗೂ ಕನಿಷ್ಠ ಬೆಂಬಲ ಬೆಲೆ ನೀಡಬೇಕು.ರಾಜ್ಯ ಸರಕಾರ ಶ್ರೀಮಂತರಿಗೆ ಅನುಕೂಲವಾಗುವಂತೆ ಭೂ ಸುಧಾರಣೆ ಕಾಯ್ದೆಗೆ ಮಾಡಿರುವ ತಿದ್ದುಪಡಿಯನ್ನು ಹಿಂಪಡೆಯಬೇಕು ಎಂಬ ಮುಖ್ಯ ಬೇಡಿಕೆಗಳನ್ನು ಕಾರ್ಮಿಕ ಸಂಘಟನೆಗಳು ಮುಂದಿಟ್ಟಿವೆ.
Kshetra Samachara
09/08/2021 02:25 pm