ಉಡುಪಿ: ಸಚಿವ ಸ್ಥಾನದ ಆಕಾಂಕ್ಷಿಗಳ ಅಸಮಾಧಾನ ವಿಚಾರವಾಗಿ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ,ಅಸಮಾಧಾನ ಕಡಿಮೆಯಾಗಲು ನಾನು ಯಾವುದೇ ಮ್ಯಾಜಿಕ್ಕನ್ನೂ ಮಾಡುತ್ತಿಲ್ಲ.
ಪ್ರೀತಿ ಮತ್ತು ವಿಶ್ವಾಸವೇ ನಾನು ಮಾಡುತ್ತಿರುವ ಮ್ಯಾಜಿಕ್ ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ಉಡುಪಿ ಜಿಲ್ಲಾಸ್ಪತ್ರೆ ಕಟ್ಟಡದ ಭೂಮಿಪೂಜೆ ಬಳಿಕ ಅವರು ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದರು.ಕೋವಿಡ್ ಸಂದರ್ಭ ಒಂದು ಲಕ್ಷ ಸಾವಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ ಎಂದು ಗಮನ ಸೆಳೆದಾಗ,ಎಲ್ಲ ಸಾವುಗಳು ಸರಕಾರದ ದಾಖಲೆಯಲ್ಲಿವೆ.
ಪ್ರತಿಯೊಂದು ಜಿಲ್ಲೆಯಲ್ಲೂ ಸರ್ಕಾರದ ದಾಖಲೆಯಲ್ಲಿ ಇವೆ. ಸಿದ್ಧರಾಮಯ್ಯ ಅವರ ಹೇಳಿಕೆಗೆ ಆಧಾರ ಕೊಟ್ಟರೆ ಪರಿಶೀಲಿಸುತ್ತೇವೆ.
ಸೆಪ್ಟೆಂಬರ್ ತಿಂಗಳಲ್ಲಿ ವಿಧಾನಸಭೆ ಅಧಿವೇಶನ ಕರೆಯುತ್ತೇವೆ ಎಂದು ಹೇಳಿದ್ದಾರೆ.
Kshetra Samachara
12/08/2021 08:07 pm