ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿಯ ಜನತೆ ಸದಾ ನನ್ನ ಹೃದಯದಲ್ಲಿ ಇರುತ್ತಾರೆ: ಸಿಎಂ ಭಾವುಕ!

ಉಡುಪಿ: ಉಡುಪಿ ಕಾರ್ಯಕ್ರಮಕ್ಕೆ ಆಗಮಿಸಿದ ಸಿಎಂ ಇವತ್ತು ಭಾವುಕರಾದ ಪ್ರಸಂಗ ನಡೆಯಿತು.ಜಿಲ್ಲಾಸ್ಪತ್ರೆ ಭೂಮಿಪೂಜೆ ಬಳಿಕ ಮಾತನಾಡಿದ ಸಿಎಂ, ಉಡುಪಿ ಕೃಷ್ಣನನ್ನು ಹೊರತುಪಡಿಸಿದರೆ ಈ ಭಾಗದ ಜೊತೆ ನನಗೆ ಯಾವುದೇ ಸಂಬಂಧವಿರಲಿಲ್ಲ.ಯಡಿಯೂರಪ್ಪನವರು ಉಡುಪಿಗೆ ನನ್ನನ್ನು ಉಸ್ತುವಾರಿ ಮಾಡಿದ್ದರು.

ಉಡುಪಿಗೆ ಯಾಕೆ ನನ್ನನ್ನು ಉಸ್ತುವಾರಿ ಮಾಡಿದ್ದರೋ ಗೊತ್ತಿಲ್ಲ. ಉಡುಪಿಯ ಜನರು ಹೃದಯವೈಶಾಲ್ಯ ಉಳ್ಳವರು.

ತಮ್ಮ ಕಷ್ಟಕ್ಕೆ ಪರಿಹಾರ ಕೇಳುತ್ತಾರೆ ವಿನಹ ವೈಯಕ್ತಿಕವಾಗಿ ಏನೂ ಕೇಳುವುದಿಲ್ಲ.ಉಡುಪಿಯ ಉಸ್ತುವಾರಿಯಿಂದ ಮುಕ್ತಗೊಳಿಸಿ ಎಂದು ಕೇಳುತ್ತಿದ್ದೆ. ಸಿಎಂ ಆಗುವ ಮೂಲಕ ಉಸ್ತುವಾರಿಯಿಂದ ಮುಕ್ತನಾಗುತ್ತೇನೆ ಎಂದು ಭಾವಿಸಿರಲಿಲ್ಲ.ಉಡುಪಿಯ ಜನತೆ ಸದಾ ನನ್ನ ಹೃದಯದಲ್ಲಿ ಇರುತ್ತಾರೆ ಎಂದು ಸಿಎಂ ಭಾವುಕರಾದರು.

Edited By : Nagesh Gaonkar
Kshetra Samachara

Kshetra Samachara

12/08/2021 08:15 pm

Cinque Terre

13.81 K

Cinque Terre

0

ಸಂಬಂಧಿತ ಸುದ್ದಿ