ಮಂಗಳೂರು: ಪುತ್ತೂರು ತಾಲೂಕಿನ ಕಬಕ ಗ್ರಾಪಂ ವ್ಯಾಪ್ತಿಯಲ್ಲಿ ಎಸ್ ಡಿಪಿಐ ಕಾರ್ಯಕರ್ತರು ದಾಂಧಲೆ ನಡೆಸಿ ಸ್ವಾತಂತ್ರ್ಯೋತ್ಸವ ರಥಕ್ಕೆ ಅಡ್ಡಿಪಡಿಸಿರುವ ವಿಚಾರದಲ್ಲಿ ಪ್ರತಿಕ್ರಿಯೆ ನೀಡಿರುವ ಸಚಿವ ಕೋಟ ಶ್ರೀನಿವಾಸ ಪೂಜಾರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಾಲಿಬಾನ್ ಸಂಸ್ಕೃತಿ ನಡೆಸಲು ಬಿಡುವುದಿಲ್ಲ ಎಂದು ಆಗ್ರಹಿಸಿದ್ದಾರೆ.
ದ.ಕ.ಜಿಲ್ಲೆ ಶಾಂತಿಯುತ ಜಿಲ್ಲೆಯಾಗಿದ್ದು, ಎಸ್ ಡಿಪಿಐ ಕಾರ್ಯಕರ್ತರು ಸ್ವಾತಂತ್ರ್ಯೋತ್ಸವ ರಥಕ್ಕೆ ಅಡ್ಡಿಪಡಿಸಿ, ವೀರಸಾರ್ವಕರ್ ಪೋಟೋ ತೆಗೆಯಲು ಒತ್ತಡ ಹಾಕಿದ್ದಾರೆ. ಅಲ್ಲದೆ ಇತರ ನಾಯಕರ ಪೋಟೋ ಹಾಕುವಂತೆ ಒತ್ತಡ ಹೇರಿದ್ದಾರೆ. ಈ ವಿಚಾರವನ್ನು ಬಿಜೆಪಿ ರಾಜ್ಯಾಧ್ಯಕ್ಷರ, ರಾಜ್ಯ ಗೃಹಮಂತ್ರಿಗಳ ಗಮನಕ್ಕೆ ತರಲಾಗಿದ್ದು, ಕೂಡಲೇ ಕೃತ್ಯ ಎಸಗಿದವರನ್ನು ಬಂಧಿಸುವಂತೆ ಒತ್ತಡ ಹೇರಿದ್ದೇನೆ ಎಂದು ಹೇಳಿದರು.
ತಕ್ಷಣ ಕೃತ್ಯ ಎಸಗಿರುವವರ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದೇನೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
Kshetra Samachara
15/08/2021 06:29 pm