ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ : ಆಗಸ್ಟ್ 18 ರಂದು ಜನಾಶೀರ್ವಾದ ಯಾತ್ರೆ ಉಡುಪಿಗೆ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ನೂತನ ಕೇಂದ್ರ ಸಚಿವರನ್ನು ಪರಿಚಯಿಸುವ ಮತ್ತು ಸರಕಾರದ ವಿವಿಧ ಜನಪರ ಯೋಜನೆಗಳನ್ನು ಪ್ರಚಲಿತಗೊಳಿಸುವ ನಿಟ್ಟಿನಲ್ಲಿ ದೇಶದಾದ್ಯಂತ ಜನಾಶೀರ್ವಾದ ಯಾತ್ರೆ ನಡೆಯಲಿದೆ ಎಂದು ಉಡುಪಿ ಜಿಲ್ಲಾ ಬಿಜೆಪಿ ತಿಳಿಸಿದೆ.ದೇಶದಲ್ಲಿ ಒಟ್ಟು 160 ದಿನ ವಿವಿಧ ತಂಡಗಳು ಪ್ರವಾಸ ಮಾಡಲಿವೆ. ಕೇಂದ್ರ ಸರಕಾರವು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಅನುಷ್ಠಾನಗೊಳಿಸಿರುವ ಯೋಜನೆಗಳು, ರೈತರ ಆದಾಯ ದ್ವಿಗುಣ, ದೀನದಲಿತರು, ಬಡವರ ಅಭ್ಯುದಯಕ್ಕಾಗಿ ಕೈಗೊಂಡ ಕಾರ್ಯಕ್ರಮಗಳನ್ನು ಪರಿಚಯಿಸಲಾಗುವುದು.ಉಡುಪಿ ಜಿಲ್ಲೆಗೆ ಅಗಸ್ಟ್ 18ರಂದು ನೂತನ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆಯವರ ನೇತೃತ್ವದಲ್ಲಿ ಆಗಮಿಸುವ ಜನಾಶೀರ್ವಾದ ಯಾತ್ರೆಯನ್ನು ಜಿಲ್ಲಾ ಬಿಜೆಪಿ ವತಿಯಿಂದ ಹೆಬ್ರಿಯಲ್ಲಿ ಸ್ವಾಗತಿಸಲಾಗುವುದು.

ಆಗಸ್ಟ್ 19ರಂದು ಬೆಳಿಗ್ಗೆ 11.00 ಗಂಟೆಗೆ ಉಡುಪಿ ಪುರಭವನದಲ್ಲಿ ಜನಾಶೀರ್ವಾದ ಯಾತ್ರೆ ಸಮಾವೇಶ ಹಾಗೂ ನೂತನ ಕೇಂದ್ರ ಸಚಿವರಿಗೆ ಅಭಿನಂದನಾ ಸಮಾರಂಭ ಸಂಪನ್ನಗೊಳ್ಳಲಿದೆ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.

Edited By : Shivu K
Kshetra Samachara

Kshetra Samachara

16/08/2021 12:30 pm

Cinque Terre

17.33 K

Cinque Terre

6