ಮುಲ್ಕಿ: ಪುತ್ತೂರು ತಾಲೂಕಿನ ಕಬಕ ದಲ್ಲಿ ಸ್ವಾತಂತ್ರ್ಯ ರಥಕ್ಕೆ ಅಡ್ಡಿಪಡಿಸಿದ ರಾಷ್ಟ್ರ ದ್ರೋಹಿಗಳ ವಿರುದ್ಧ ಕಠಿನ ಕ್ರಮ ಕೈಗೊಳ್ಳುವಂತೆ ಮಂಗಳೂರು ತಾಲೂಕಿನ ವಿಶ್ವ ಹಿಂದೂ ಪರಿಷತ್ ಜಿಲ್ಲೆಯಾದ್ಯಂತ ಪೊಲೀಸ್ ಠಾಣೆಯ ಎದುರು ಪ್ರತಿಭಟನೆ ನಡೆಸುವಂತೆ ಕರೆ ಕೊಟ್ಟ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಮೂಲ್ಕಿ ಪ್ರಖಂಡ, ಮುಲ್ಕಿ ತಾಲೂಕು ಹಿಂದೂ ಜಾಗರಣ ವೇದಿಕೆ, ಮುಲ್ಕಿ ಬಿಜೆಪಿ ವತಿಯಿಂದ ಮುಲ್ಕಿ ಪೊಲೀಸ್ ಠಾಣೆಯ ಎದುರು ಬೃಹತ್ ಪ್ರತಿಭಟನೆ ನಡೆಯಿತು.
ಈ ಸಂದರ್ಭ ವಿಶ್ವ ಹಿಂದೂ ಪರಿಷತ್ ಪ್ರಖಂಡದ ಕಾರ್ಯದರ್ಶಿ ಶ್ಯಾಮ್ ಸುಂದರ್ ಶೆಟ್ಟಿ ಮಾತನಾಡಿ ದೇಶ ದ್ರೋಹಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.
ಬಿಜೆಪಿ ಮಂಡಲಾಧ್ಯಕ್ಷ ಸುನಿಲ್ ಆಳ್ವ ಮಾತನಾಡಿದರು
ಈ ನಡುವೆ ಹಿಂದೂ ಸಂಘಟನೆಗಳು ಪ್ರತಿಭಟನೆ ಗೆಂದು ಮುಲ್ಕಿ ಠಾಣೆ ಎದುರು ಜಮಾಯಿಸುದ್ದಂತೆ ಕಾರ್ಯಪ್ರವೃತ್ತರಾದ ಮುಲ್ಕಿ ಪೊಲೀಸರು ಬಿಗು ಬಂದೋಬಸ್ತ್ ಏರ್ಪಡಿಸಿದ್ದರು.
ಈ ಸಂದರ್ಭ ಜಿಲ್ಲಾ ಉಪಾಧ್ಯಕ್ಷ ಈಶ್ವರ ಕಟೀಲು ಹಾಗೂ ಮುಲ್ಕಿ ಇನ್ಸ್ಪೆಕ್ಟರ್ ಕುಸುಮಾಧರ ನಡುವೆ ಮಾತಿನ ಚಕಮಕಿ ನಡೆಯಿತು. ಈ ಸಂದರ್ಭ ಈಶ್ವರ ಕಟೀಲ್ ಮುಲ್ಕಿ ಠಾಣಾ ವ್ಯಾಪ್ತಿಯ ಕಿನ್ನಿಗೋಳಿಯ ಗುತ್ತಕಾಡು ಸಹಿತ ಅನೇಕ ಕಡೆ ನಡೆಯುತ್ತಿರುವ ಅಕ್ರಮ ಗೋವಧೆ ಪ್ರಸ್ತಾಪಿಸಿ ಅಕ್ರಮಗಳನ್ನು ನಿಲ್ಲಿಸದಿದ್ದರೆ ಠಾಣೆಯ ಎದುರು ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.
ಈ ಸಂದರ್ಭ ಬಜರಂಗದಳದ ಮೂಲ್ಕಿ ಸಂಚಾಲಕ ಹರ್ಷಿತ್, ಗೋರಕ್ಷಕ ಪ್ರಮುಖ್ ಅಮಿತ್ ಶೆಟ್ಟಿ, ಮುಲ್ಕಿ ನಪಂ ಅಧ್ಯಕ್ಷ ಸುಭಾಷ್ ಶೆಟ್ಟಿ, ಉಪಾಧ್ಯಕ್ಷ ಸತೀಶ್ ಅಂಚನ್, ಬಿಜೆಪಿ ಪ್ರಮುಖರಾದ ಕೇಶವ ಕಿನ್ನಿಗೊಳಿ, ವಿಠ್ಠಲ್ ಎನ್ಎಂ, ಶರತ್ ಕುಬೆವೂರು, ರಂಗನಾಥ ಶೆಟ್ಟಿ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
Kshetra Samachara
17/08/2021 03:47 pm