ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಬಕ ಘಟನೆ ಖಂಡನೀಯ: ತಪ್ಪಿತಸ್ಥರನ್ನು ಬಿಡುವ ಪ್ರಶ್ನೆ ಇಲ್ಲ: ಶಾಸಕ ಭರತ್ ಶೆಟ್ಟಿ ಹೇಳಿಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಕಬಕದಲ್ಲಿ ಸಾವರ್ಕರ್ ಫೋಟೋಗೆ ವಿರೋಧ ವ್ಯಕ್ತಪಡಿಸಿದ ಎಸ್ ಡಿಪಿಐ ಕಾರ್ಯಕರ್ತರ ನಡೆ ಖಂಡನೀಯ ಎಂದು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಭರತ್ ಶೆಟ್ಟಿ ಹೇಳಿದ್ದಾರೆ.

ಮಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ವೀರ್ ಸಾವರ್ಕರ್ ಹೆಸರಿನ ಮುಂದೆ ಸ್ವಾತಂತ್ರ್ಯ ಹೋರಾಟಗಾರ ಎಂಬುವುದಿದೆ. ಸ್ವಾತಂತ್ರ್ಯ ರಥದಲ್ಲಿ ಸಾವರ್ಕರ್ ಫೋಟೋ ಹಾಕಿರುವುದಕ್ಕೆ ವಿರೋಧ ವ್ಯಕ್ತಪಡಿಸಿದ ಘಟನೆಗೆ ಯಾರು ಕಾರಣವೋ, ಅವರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲು ಗೃಹಸಚಿವರಿಗೆ ಮನವಿ ಮಾಡಿದ್ದೇವೆ. ಈ ಘಟನೆ ಕುರಿತು ಶಾಸಕ ಯುಟಿ ಖಾದರ್ ಹಗುರವಾಗಿ ಮಾತನಾಡಿದ್ದಾರೆ. ಅವರು ವೀರ್ ಸಾವರ್ಕರ್ ಕುರಿತು ಪುಸ್ತಕಗಳನ್ನು ಅಧ್ಯಯನ ಮಾಡುವುದು ಒಳಿತು. ಇನ್ನು ರಮಾನಾಥ ರೈ ಸೇರಿದಂತೆ ಕಾಂಗ್ರೆಸ್ ನ ಹಿರಿಯ ಮುಖಂಡರು ಈ ಘಟನೆಯನ್ನು ಖಂಡಿಸಿಲ್ಲ ಎಂದ ಅವರು, ಇವರ ಮೌನವನ್ನು ನೋಡಿದರೆ ಇವರಿಗೂ ಅವರಿಗೂ ಏನೋ ಲಿಂಕ್ ಇದ್ಯಾ ಎಂದು ಅನ್ನಿಸುತ್ತಿದೆ ಎಂದರು. ಶಾಹೀನ್ ಬಾಗ್ ಪ್ರತಿಭಟನೆಯಲ್ಲಿ ಎಸ್ ಡಿಪಿಐ ಜೊತೆಗೆ ಇತರ ಸಂಘಟನೆಯವರು ಕೈಜೋಡಿಸಿದ್ದಾರೆ ಅಂದರು. ಯಾವುದೇ ಕಾರಣಕ್ಕೂ ಬಿಜೆಪಿ ಈಗಲೂ, ಮುಂದೆಯೂ ಎಸ್ ಡಿಪಿಐ ಪಕ್ಷದ ಜೊತೆಗೆ ಒಳಒಪ್ಪಂದ ಮಾಡಿಲ್ಲ, ಮಾಡುವುದು ಇಲ್ಲ ಎಂದು ಸ್ಪಷ್ಟನೆ ನೀಡಿದರು.

Edited By : Manjunath H D
Kshetra Samachara

Kshetra Samachara

17/08/2021 04:21 pm

Cinque Terre

10.22 K

Cinque Terre

3

ಸಂಬಂಧಿತ ಸುದ್ದಿ