ಮುಲ್ಕಿ: ಅತಿಕಾರಿಬೆಟ್ಟು ಗ್ರಾಮ ಪಂಚಾಯತ್ ಕಚೇರಿಗೆ ನೂತನ ಧ್ವಜಸ್ತಂಭವನ್ನು ಕೊಡುಗೆ ನೀಡಿದ ಉದ್ಯಮಿ ಹಾಗೂ ಶಿಮಂತೂರು ಶ್ರೀ ಆದಿ ಜನಾರ್ಧನ ದೇವಸ್ಥಾನದ ಆಡಳಿತ ಮೊಕ್ತೇಸರ ಚಂದ್ರಹಾಸ ಎನ್. ಶೆಟ್ಟಿ ಅವರನ್ನು ಪಂಚಾಯತ್ ವತಿಯಿಂದ ಗೌರವಿಸಲಾಯಿತು.
ಅತಿಕಾರಿಬೆಟ್ಟು ಗ್ರಾಪಂ ಅಧ್ಯಕ್ಷ ಮನೋಹರ ಕೋಟ್ಯಾನ್ ಮಾತನಾಡಿ, ದಾನಿಗಳ ಸಹಕಾರದಿಂದ ಪಂಚಾಯತ್ ವ್ಯಾಪ್ತಿಯಲ್ಲಿ ಮೂಲಭೂತ ಸೌಕರ್ಯಗಳ ಮೂಲಕ ಅಭಿವೃದ್ಧಿ ಕಾರ್ಯ ನಡೆಯುತ್ತಿರುವುದು ಅಭಿನಂದನೀಯ ಎಂದರು.
ಈ ಸಂದರ್ಭದಲ್ಲಿ ಪಂಚಾಯತ್ ಸದಸ್ಯರಾದ ಕೃಷ್ಣ ಶೆಟ್ಟಿಗಾರ್, ಸಹಕಾರಿ ಪ್ರಕೋಷ್ಠದ ಅಧ್ಯಕ್ಷರಾದ ರಂಗನಾಥ ಶೆಟ್ಟಿ,ಮಾಜೀ ಸದಸ್ಯಹರೀಶ್ ಶೆಟ್ಟಿ, ಗ್ರಾಮಸ್ಥರಾದ ದಿನೇಶ್ವಂದ್ರ ಅಜಿಲ, ನಿತಿನ್ ಶೆಟ್ಟಿ ಪಂಜಿನಡ್ಕ, ದೇವಪ್ರಸಾದ್, ಕೆಂಪುಗುಡ್ಡೆ, ಮತ್ತಿತರರು ಉಪಸ್ಥಿತರಿದ್ದರು.
Kshetra Samachara
17/08/2021 05:38 pm