ಮುಲ್ಕಿ: ಭಾರತದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಯೋಜನೆಗಳ ಜನಜಾಗೃತಿಗಾಗಿ ರಾಜ್ಯಾದ್ಯಂತ ಆರಂಭಗೊಂಡಿರುವ ಜನಾಶೀರ್ವಾದ ಯಾತ್ರೆಯ ನೇತೃತ್ವ ವಹಿಸಿರುವ ಕೇಂದ್ರ ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವರಾದ ರಾಜೀವ್ ಚಂದ್ರಶೇಖರ್ ರವರಿಗೆ ಅವಿಭಾಜಿತ ದಕ್ಷಿಣಕನ್ನಡ ಜಿಲ್ಲೆಯ ಗಡಿಭಾಗದ ಪ್ರದೇಶವಾದ ಮುಲ್ಕಿ ಬಸ್ ನಿಲ್ದಾಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಉಸ್ತುವಾರಿ ಸಚಿವರಾದ ಅಂಗಾರ ಹಾಗೂ ದಕ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ನೇತೃತ್ವದಲ್ಲಿ ಸ್ವಾಗತಿಸಲಾಯಿತು.
ಈ ಸಂದರ್ಭ ವಿಧಾನಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಬಿಜೆಪಿ ನಾಯಕರಾದ ಸಂತೋಷ್ ಕುಮಾರ್ ಬೋಳಿಯಾರ್, ಕಸ್ತೂರಿ ಪಂಜ,ಮುಲ್ಕಿ-ಮೂಡಬಿದ್ರೆ ಮಂಡಲಾಧ್ಯಕ್ಷ ಸುನಿಲ್ ಆಳ್ವ, ಮುಲ್ಕಿ ನಪಂ ಅಧ್ಯಕ್ಷ ಸುಭಾಷ್ ಶೆಟ್ಟಿ, ಉಪಾಧ್ಯಕ್ಷ ಸತೀಶ್ ಅಂಚನ್, ದ.ಕ. ಜಿಲ್ಲಾ ಬಿಜೆಪಿಸಮಿತಿ ಸದಸ್ಯ ವಿನೋದ್ ಸಾಲ್ಯಾನ್ ಬೆಳ್ಳಾಯರು, ರಮಾನಾಥ ಪೈ, ಮತ್ತಿತರರು ಉಪಸ್ಥಿತರಿದ್ದರು.
Kshetra Samachara
17/08/2021 06:30 pm