ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ:ರೈತ ಹೋರಾಟಗಾರರ ಕುರಿತು ಹಗುರವಾಗಿ ಮಾತನಾಡಿದ ಶೋಭಾ ಜಿಲ್ಲೆಗೆ ಕಳಂಕ ; ಕ್ಯಾಂಪಸ್ ಫ್ರಂಟ್

ಉಡುಪಿ: ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೇಶಾದ್ಯಂತ ವಿವಿಧ ಕಡೆಗಳಲ್ಲಿ ಕಳೆದ ಹಲವಾರು ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿರುವ ರೈತರ ಸಮಸ್ಯೆಗಳನ್ನು ಕೇಂದ್ರ ಸರ್ಕಾರ ಬಗೆಹರಿಸುವ, ಪರಿಹಾರ ಕೊಡುವ ನಿಟ್ಟಿನಲ್ಲಿ ಕ್ರಮಕ್ಕೆ ಮುಂದಾಗದೇ ಪ್ರತಿಭಟನಾ ನಿರತ ರೈತರನ್ನು ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ದಲ್ಲಾಳಿಗಳು ಎಂದು ಅಪಮಾನಿಸಿದ್ದು ಸಹಿಸಲಾಗದು.

ಶೋಭಾ ಕರಂದ್ಲಾಜೆ ಉಡುಪಿ ಜಿಲ್ಲೆಯ ಪ್ರತಿನಿಧಿಯಾಗಿ ಲೋಕಸಭೆಗೆ ಆಯ್ಕೆಯಾಗಿ, ಉನ್ನತ ಸ್ಥಾನದಲ್ಲಿದ್ದುಕೊಂಡು ಅನ್ನದಾತರ ಬಗ್ಗೆ ಇಂತಹ ಕೀಳು ಮಟ್ಟದ ಹೇಳಿಕೆ ನೀಡಿ ನಮ್ಮ ಜಿಲ್ಲೆಗೆ ಕಳಂಕ ತಂದಿದ್ದಾರೆ, ಇದನ್ನು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಜಿಲ್ಲಾ ಸಮಿತಿಯು ತೀವ್ರವಾಗಿ ಖಂಡಿಸುತ್ತದೆ. ರೈತರ ಸಮಸ್ಯೆ ಬಗೆಹರಿಸಲು ಸಾಧ್ಯವಾಗದಿದ್ದರೆ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಜಿಲ್ಲಾ ಕಾರ್ಯದರ್ಶಿ ಮಸೂದ್ ಮನ್ನಾ ಆಗ್ರಹಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

18/08/2021 05:44 pm

Cinque Terre

25.55 K

Cinque Terre

30

ಸಂಬಂಧಿತ ಸುದ್ದಿ