ಪುತ್ತೂರು: ವೀರ ಸಾವರ್ಕರ್ ಹೆಸರಿನಲ್ಲಿ ಅಶಾಂತಿ ಸೃಷ್ಟಿಸಲು ಸಂಘ ಪರಿವಾರ ಷಡ್ಯಂತ್ರ ನಡೆಸುತ್ತಿದೆ ಎಂದು ಆರೋಪಿಸಿ ಎಸ್ ಡಿಪಿಐ ಪುತ್ತೂರಿನ ದರ್ಬೆ ವೃತ್ತದ ಬಳಿ ಪ್ರತಿಭಟನೆ ನಡೆಸಿತು. ಇದೇ ವೇಳೆ ಮಾತನಾಡಿದ ಎಸ್‍ಡಿಪಿಐ ರಾಜ್ಯ ಸಮಿತಿ ಸದಸ್ಯ ಶಾಫಿ ಬೆಳ್ಳಾರೆ, ಕಬಕ ಗ್ರಾಮ ಪಂಚಾಯತ್‍ನಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಕಾನೂನು ಕ್ರಮಕ್ಕೆ ನಮ್ಮ ಬೆಂಬಲವಿದೆ. ಕಬಕ ಗ್ರಾಮ ಪಂಚಾಯತ್ ನಡೆಸಿರುವ ರಥ ಯಾತ್ರೆಯು ಆ ಗ್ರಾಮ ಪಂಚಾಯತ್‍ನಲ್ಲಿ ಸಂಚರಿಸಬೇಕಿತ್ತು. ಆದರೆ ಅದನ್ನು ಬಿಟ್ಟು ಉಳಿದ ಭಾಗಕ್ಕೆ ರಥವು ಸಂಚಾರ ನಡೆಸಿರುವ ಉದ್ದೇಶವಾದರೂ ಏನಿತ್ತು ಎಂಬುದನ್ನು ಬಹಿರಂಗಗೊಳಿಸಬೇಕು ಎಂದು ಆಗ್ರಹಿಸಿದರು.
ಎಸ್‍ಡಿಪಿಐ ಪುತ್ತೂರು ವಿಧಾನ ಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಕೆ. ಎ. ಸಿದ್ದೀಕ್ ಮಾತನಾಡಿದರು. ಪ್ರತಿಭಟನೆಯಲ್ಲಿ ಎಸ್‍ಡಿಪಿಐ ಮುಖಂಡರಾದ ಇಬ್ರಾಹಿಂ ಹಾಜಿ ಸಾಗರ್, ಅಬ್ದುಲ್ ಹಮೀದ್ ಸಾಲ್ಮರ, ಅಶ್ರಫ್ ಬಾವು, ಯಹ್ಯಾ ಕೂರ್ನಡ್ಕ, ರಫೀಕ್ ಎಂ.ಎ. ಜುನೈದ್ ಸಾಲ್ಮರ, ಶಾಕಿರ್ ಅಳಕೆಮಜಲು ಮತ್ತಿತರರು ಉಪಸ್ಥಿತರಿದ್ದರು.
ಪ್ರತಿಭಟನಾ ಸ್ಥಳದಲ್ಲಿ ಪುತ್ತೂರು ಉಪವಿಭಾಗದ ಸಹಾಯಕ ಕಮಿಷನರ್ ಡಾ. ಯತೀಶ್ ಉಳ್ಳಾಲ್, ತಹಶೀಲ್ದಾರ್ ರಮೇಶ್ ಬಾಬು, ಪುತ್ತೂರು ಉಪವಿಭಾಗದ ಪೊಲೀಸ್ ವರಿಷ್ಠಾಧಿಕಾರಿ ಗಾನ ಪಿ ಕುಮಾರ್, ನಗರಸಭಾ ಪೌರಾಯುಕ್ತ ಮಧು ಎಸ್ ಮನೋಹರ್, ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಕ್ ರೈ, ನಗರ ಠಾಣೆಯ ಇನ್ಸ್ ಪೆಕ್ಟರ್ ಗೋಪಾಲ್ ನಾಯ್ಕ್ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
18/08/2021 07:44 pm