ಉಡುಪಿ: ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ನೇತೃತ್ವದ ಜನಾಶೀರ್ವಾದ ಯಾತ್ರೆ ಉಡುಪಿಗೆ ತಲುಪಿದ್ದು ಇವತ್ತು ಉಡುಪಿಯಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಇವತ್ತು ಬೆಳಿಗ್ಗೆ ಸಚಿವೆ ಶೋಭಾ ಕರಂದ್ಲಾಜೆ ಕೃಷ್ಣಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಕೈಗೊಂಡರು. ಕಿಂಡಿಯ ಮೂಲಕ ಕಡಗೋಲು ಕೃಷ್ಣನ ದರ್ಶನ ಮಾಡಿದ ಸಚಿವೆ,ಬಳಿಕ ರಥಬೀದಿಯಲ್ಲಿರುವ ಅಷ್ಟ ಮಠಗಳಿಗೆ ಭೇಟಿ ನೀಡಿದರು.
ಅನಂತೇಶ್ವರ ,ಚಂದ್ರಮೌಳೇಶ್ವರ ದೇವರಿಗೆ ಪ್ರಾರ್ಥನೆ ಸಲ್ಲಿಸಿದ ಬಳಿಕ ಪರ್ಯಾಯ ಅದಮಾರು ಮಠಾಧೀಶರೊಂದಿಗೆ ಸಮಾಲೋಚನೆ ನಡೆಸಿದರು.ಈ ಸಂದರ್ಭ ಪರ್ಯಾಯ ಶ್ರೀಗಳು ನೂತನ ಸಚಿವರಿಗೆ ಗೌರವ ಸಮರ್ಪಣೆ ಮಾಡಿದರು.
Kshetra Samachara
19/08/2021 10:12 am