ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಅಂಬೇಡ್ಕರ್ ಕಟ್ಟಡಕ್ಕೆ ಮಾಜಿ ಸಚಿವ ರಮಾನಥ್ ರೈ ಸೇರಿದಂತೆ ದ.ಕಜಿಲ್ಲಾ ಕಾಂಗ್ರೆಸ್ ಮುಖಂಡರ ಭೇಟಿ...

ಮಂಗಳೂರು: ಕಾಂಗ್ರೆಸ್ ಸರಕಾರದಲ್ಲಿ ಮಂಜೂರಾಗಿದ್ದ‌ ಮಂಗಳೂರು ನಗರದ‌ ಉರ್ವ ಸ್ಟೋರ್

ಬಳಿ ಇರುವ ಅಂಬೇಡ್ಕರ್ ಭವನವನ್ನು ಮೊನ್ನೆ ಸಿಎಂ‌ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದ್ದರು. ಇಂದು ಅಂಬೇಡ್ಕರ್ ಭವನ ಕಟ್ಟಡಕ್ಕೆ ಮಾಜಿ ಸಚಿವ ರಮಾನಾಥ ರೈ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಕಾಂಗ್ರೆಸ್ ಮುಖಂಡರು ಸೇರಿದಂತೆ ಹಲವು ಮಂದಿ ಭೇಟಿ ನೀಡಿದ್ರು.

ಇದೇ ವೇಳೆ ಮಾತನಾಡಿದ ಮಾಜಿ ಸಚಿವ ರಮಾನಾಥ ರೈ, ನಮ್ಮ ಪಕ್ಷ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಬಹಳಷ್ಟು ಬೇಡಿಕೆಗಳಿದ್ದವು. ನಾನು ಜಿಲ್ಲಾ ಉಸ್ತುವಾರಿ ಮಂತ್ರಿಯಾಗಿದ್ದ ವೇಳೆ ಅಂಬೇಡ್ಕರ್ ಭವನದ ನಿರ್ಮಾಣ ಕಾರ್ಯಕ್ಕೆ ಮುಂದಾಗಿದ್ದೆವು. ಬಹಳಷ್ಟು ಚರ್ಚೆಗಳು ನಡೆದ ಬಳಿಕ ಅಂಬೇಡ್ಕರ್ ಭವನಕ್ಕೆ ಮಂಜೂರಾತಿ ನೋಡಿ ಒಂದು ನಿರ್ದಿಷ್ಟವಾದ ಜಾಗದಲ್ಲಿ ಭವನ ನಿರ್ಮಿಸಲು ನಾವು ಕೆಲಸ ಮಾಡಿದ್ದೇವೆ. ಸಮಾಜಕ್ಕೆ ಒಂದೊಳ್ಳೆಯ ಕಟ್ಟಡ ನಿರ್ಮಾಣ ಮಾಡಿಕೊಟ್ಟ ಖುಷಿ ಇದೆ ಎಂದರು.

ಉದ್ಘಾಟನಾ ಸಮಯದಲ್ಲಿ ಮಾಜಿ ಸಚಿವ ರಮಾನಾಥ ರೈಯವರನ್ನು ಆಹ್ವಾನಿಸದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು.

Edited By : Manjunath H D
Kshetra Samachara

Kshetra Samachara

19/08/2021 05:13 pm

Cinque Terre

11.79 K

Cinque Terre

3

ಸಂಬಂಧಿತ ಸುದ್ದಿ