ಮುಲ್ಕಿ: ಮುಲ್ಕಿ ನಗರ ಪಂಚಾಯತ್ ಗೆ ವಿಶೇಷ ಅನುದಾನ ನೀಡುವಂತೆ ಶಾಸಕರ ನೇತೃತ್ವದಲ್ಲಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭ ಶಾಸಕ ಉಮನಾಥ ಕೋಟ್ಯಾನ್ ಮಾತನಾಡಿ ಕಳೆದ ಎರಡು ವರ್ಷಗಳಿಂದ ತಾನು ಕ್ಷೇತ್ರದ ಶಾಸಕನಾಗಿ ಆಯ್ಕೆಯಾದ ಬಳಿಕ ಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದ್ದು ಮುಲ್ಕಿ-ಮೂಡಬಿದ್ರೆ ಕ್ಷೇತ್ರದಲ್ಲಿ ಮತ್ತಷ್ಟು ಅಭಿವೃದ್ಧಿ ಕಾರ್ಯಗಳಿಗೆ ಹಾಗೂ ಮುಲ್ಕಿ ನಗರ ಪಂಚಾಯತ್ ಗೆ ವಿಶೇಷ ಅನುದಾನ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಯವರಿಗೆ ಮನವಿ ಸಲ್ಲಿಸಲಾಗಿದೆ ಎಂದರು.
ಈ ಸಂದರ್ಭ ಮೂಲ್ಕಿ ನಗರ ಪಂಚಾಯತ್ ಅಧ್ಯಕ್ಷ ಸುಭಾಷ್ ಶೆಟ್ಟಿ, ಉಪಾಧ್ಯಕ್ಷ ಸತೀಶ್ ಅಂಚನ್, ಸ್ಥಾಯಿ ಸಮಿತಿ ಅಧ್ಯಕ್ಷ ಶೈಲೇಶ್ ಕುಮಾರ್, ಬಿಜೆಪಿ ಪ್ರಮುಖರಾದ ರಮಾನಾಥ ಪೈ, ವಿಟ್ಟಲ್ ಎನ್ಎಂ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
19/08/2021 06:37 pm