ಮಂಗಳೂರು: ಮಂಗಳೂರಿನಲ್ಲಿ ಎನ್.ಐ.ಎ ಕೇಂದ್ರ ಸ್ಥಾಪನೆ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳೂರಲ್ಲಿ ಗೃಹಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಕರಾವಳಿಯಲ್ಲಿ ಕೆಲ ವರ್ಷಗಳಿಂದ ಭಯೋತ್ಪಾದಕ ಚಟುವಟಿಕೆ ನಡೀತಾ ಇದೆ. ಇದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಈ ಚಟುವಟಿಕೆಗಳ ಮೇಲೆ ಹೆಚ್ಚಿನ ನಿಗಾ ವಹಿಸಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಕೇಂದ್ರದ ಜೊತೆ ಮಾತನಾಡಿ ಎನ್.ಐ.ಎ ಕಚೇರಿ ಸ್ಥಾಪಿಸುವ ಬಗ್ಗೆ ಚರ್ಚೆ ನಡೆಸುತ್ತೇವೆ ಎಂದರು.
ಇನ್ನು ಅಫ್ಘಾನಿಸ್ತಾನದಲ್ಲಿ ಕನ್ನಡಿಗರು ಅತಂತ್ರರಾಗಿದ್ದು ಕೇಂದ್ರ ಸರ್ಕಾರದಿಂದ ಅವರನ್ನು ಕರೆತರುವ ವ್ಯವಸ್ಥೆಯಾಗುತ್ತಿದೆ. ರಾಜ್ಯದಿಂದ ನೋಡಲ್ ಆಫೀಸರ್ ನೇಮಕ ಮಾಡಿದ್ದೇವೆ. ಸಿ.ಐ.ಡಿಯಲ್ಲಿ ಕರ್ತವ್ಯದಲ್ಲಿರುವ ಉಮೇಶ್ ಅವರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಿದ್ದೇವೆ. ಈ ಹಿಂದೆ ವಿದೇಶದಲ್ಲಿ ಅತಂತ್ರರಾಗಿದ್ದ ಕನ್ನಡಿಗರನ್ನು ಕರೆ ತಂದಿದ್ದಾರೆ. ಸಂಕಷ್ಟದಲ್ಲಿರುವವರು ಅವರನ್ನು ಸಂಪರ್ಕ ಮಾಡಬಹುದು ಎಂದರು
Kshetra Samachara
20/08/2021 03:38 pm