ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: ಬಪ್ಪನಾಡು ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ಆದ್ಯತೆ: ಉಮಾನಾಥ್ ಕೋಟ್ಯಾನ್

ಮುಲ್ಕಿ: ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಎಂ ಆರ್ ಪಿ ಎಲ್ - ಸಿ ಎಸ್ ಆರ್ ಫಂಡ್ ಅನುದಾನದಲ್ಲಿ ಸುಮಾರು 42.05 ಲಕ್ಷ ವೆಚ್ಚದ ಒಳಚರಂಡಿ ನೀರಿನ ಶುದ್ಧೀಕರಣ ಘಟಕ ಉದ್ಘಾಟನೆಯನ್ನು ದೇವಸ್ಥಾನದ ಅರ್ಚಕ ಶ್ರೀಪತಿ ಉಪಾಧ್ಯಾಯ ಹಾಗೂ ನರಸಿಂಹ ಭಟ್ ರವರ ವಿಶೇಷ ಪ್ರಾರ್ಥನೆಯೊಂದಿಗೆ ಶಾಸಕ ಉಮಾನಾಥ ಕೋಟ್ಯಾನ್ ನೆರವೇರಿಸಿದರು.

ಈ ಸಂದರ್ಭ ಅವರು ಮಾತನಾಡಿ ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ನಡೆಯುತ್ತಿದ್ದು ತ್ಯಾಜ್ಯ ನೀರನ್ನು ಶುದ್ಧೀಕರಣ ಮಾಡುವ ಯೋಜನೆ ಮೂಲಕ ದೇವಸ್ಥಾನದ ಪರಿಸರದ ಸ್ವಚ್ಛತೆಗೆ ಆದ್ಯತೆ ನೀಡಲಾಗಿದೆ.

ಮುಂದಿನ ದಿನಗಳಲ್ಲಿ ದೇವಸ್ಥಾನದಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವುದರ ಜೊತೆಗೆ ಮತ್ತಷ್ಟು ಅಭಿವೃದ್ಧಿ ಕೆಲಸಗಳು ಸರಕಾರ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ ನಡೆಯಲಿದೆ ಎಂದರು.

ಈ ಸಂದರ್ಭ ದೇವಸ್ಥಾನದ ಅನುವಂಶಿಕ ಮೊಕ್ತೇಸರ ದುಗ್ಗಣ್ಣ ಸಾವಂತರು, ಆಡಳಿತ ಮೊಕ್ತೇಸರ ಎಂ. ಎನ್ ಮನೋಹರ್ ಶೆಟ್ಟಿ , ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಕಿಲ್ಪಾಡಿ ಭಂಡಸಾಲೆ ಶೇಖರ್ ಶೆಟ್ಟಿ, ಕಸಾಪ ಮಾಜೀ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು, ಧಾರ್ಮಿಕ ಪರಿಷತ್ ಸದಸ್ಯ ಭುವನಾಭಿರಾಮ ಉಡುಪ, ಮುಲ್ಕಿ ನಪಂ ಅಧ್ಯಕ್ಷ ಸುಭಾಷ್ ಶೆಟ್ಟಿ, ಉಪಾಧ್ಯಕ್ಷ ಸತೀಶ್ ಅಂಚನ್, ಸಹಕಾರಿ ಪ್ರಕೋಷ್ಠದ ಸಂಚಾಲಕ ರಂಗನಾಥ ಶೆಟ್ಟಿ, ಧನಂಜಯ ಮಟ್ಟು,ಎಂಆರ್ಪಿಎಲ್ ಸಂಸ್ಥೆಯ ಬಿ ಎಚ್ ವಿ ಪ್ರಸಾದ್, ಕೃಷ್ಣಶೆಟ್ಟಿ,ಗೌರವ ತಾಂತ್ರಿಕ ಸಲಹೆಗಾರ ಜೀವನ್ ಕೆ. ಶೆಟ್ಟಿ ಕಾರ್ನಾಡ್ ಮತ್ತಿತರರು ಉಪಸ್ಥಿತರಿದ್ದರು.

ಬ್ರಹ್ಮ ಕಲಶೋತ್ಸವ ಕಾರ್ಯದರ್ಶಿ ಸುನಿಲ್ ಆಳ್ವ ಸ್ವಾಗತಿಸಿದರು, ಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಧನ್ಯವಾದ ಅರ್ಪಿಸಿದರು

Edited By : PublicNext Desk
Kshetra Samachara

Kshetra Samachara

20/08/2021 05:07 pm

Cinque Terre

8.27 K

Cinque Terre

0

ಸಂಬಂಧಿತ ಸುದ್ದಿ