ಕಾಪು : ತಾಲೂಕಿನ ಹಲವೆಡೆ ವರಮಹಾ ಲಕ್ಷ್ಮೀ ಪೂಜೆಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಕಾಪು ಬಿಲ್ಲವರ ಸಹಾಯಕ ಸಂಘದಲ್ಲಿ ಗುರುಶ್ರೀ ಮಹಿಳಾ ಬಳಗದ ವತಿಯಿಂದ ವರಮಹಾಲಕ್ಷ್ಮಿ ಪೂಜೆಯು ಚರಣ್ ಶಾಂತಿ ಕಟಪಾಡಿ ಇವರ ಪೌರೋಹಿತ್ಯದಲ್ಲಿ ಪೂಜಾ ವಿಧಿವಿಧಾನಗಳು ನೆರವೇರಿದವು.
ಈ ಸಂದರ್ಭದಲ್ಲಿ ಗುರುಶ್ರೀ ಮಹಿಳಾ ಘಟಕದ ಸದಸ್ಯರಿಂದ ಭಜನಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಬಿಲ್ಲವರ ಸಹಾಯಕ ಸಂಘದ ಗೌರವಾಧ್ಯಕ್ಷ ಪ್ರಭಾಕರ್ ಪೂಜಾರಿ, ಅಧ್ಯಕ್ಷ ವಿಕ್ರಂ ಕಾಪು, ಪುರಸಭೆಯ ಮಾಜಿ ಅಧ್ಯಕ್ಷ ಅನಿಲ್ ಕುಮಾರ್, ಮಹಿಳಾ ಮಂಡಳಿಯ ಅಧ್ಯಕ್ಷೆ ಆಶಾ ಶಂಕರ್ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
20/08/2021 06:55 pm