ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಜೋಕಟ್ಟೆ: ಪಕ್ಷ ಬಲಪಡಿಸಿ, ಚುನಾವಣೆಗೆ ಸಿದ್ಧರಾಗಿ; ಅಭಯಚಂದ್ರ ಜೈನ್

ಬೈಕಂಪಾಡಿ: ಮುಲ್ಕಿ-ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ತೋಕೂರು-62 ಜಿಲ್ಲಾ ಪಂಚಾಯತ್ ಕ್ಷೇತ್ರ ಒಳಪಟ್ಟ ಜೋಕಟ್ಟೆ ಪಂಚಾಯತ್ ವ್ಯಾಪ್ತಿಯ ಪ್ರಜಾಪ್ರತಿನಿಧಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾಜಿ ಸಚಿವ ಅಭಯಚಂದ್ರ ಜೈನ್ ಹಾಗೂ ರಾಜ್ಯ ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ ಭಾಗವಹಿಸಿ ಪಕ್ಷ ಸಂಘಟನೆ ಕುರಿತು ಸಮಾಲೋಚನೆ ನಡೆಸಿದರು.

ಈ ಸಂದರ್ಭ ಮಾಜಿ ಸಚಿವ ಅಭಯಚಂದ್ರ ಜೈನ್ ಮಾತನಾಡಿ, ಮುಂಬರುವ ಚುನಾವಣೆಗಳಿಗೆ ಪಕ್ಷದ ಯುವ ಕಾರ್ಯಕರ್ತರು ಮನೆಮನೆಗೆ ತೆರಳಿ ಪಕ್ಷದ ಸಾಧನೆಗಳನ್ನು ಜನರಿಗೆ ತಿಳಿಸಿ ಪಕ್ಷವನ್ನು ಬಲಪಡಿಸಲು ಮುಂದಾಗಬೇಕು ಎಂದು ಕರೆ ನೀಡಿದರು.

ಸಭೆಯಲ್ಲಿ ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮೋಹನ್ ಕೋಟ್ಯಾನ್, ಕೆಪಿಸಿಸಿ ಕೋಆರ್ಡಿನೇಟರ್ ವಸಂತ ಬೆರ್ನಾಡ್, ಮುಲ್ಕಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಪೂಜಾರ್, ಕಾಂಗ್ರೆಸ್ ಮುಖಂಡರಾದ ಉಲ್ಲಾಸ್ ಶೆಟ್ಟಿ, ಹಸನಬ್ಬ ಬಾಳ ಇದ್ದರು.

Edited By : PublicNext Desk
Kshetra Samachara

Kshetra Samachara

21/08/2021 08:48 pm

Cinque Terre

5.38 K

Cinque Terre

1

ಸಂಬಂಧಿತ ಸುದ್ದಿ