ಮಂಗಳೂರು: ಕಾಂಗ್ರೆಸ್ ಪಕ್ಷ ಕೂಡ ಹಿಂದೂ ಧರ್ಮದ ಎಲ್ಲಾ ಆಚರಣೆಗಳನ್ನು ಮಾಡುವುದರ ಜೊತೆಗೆ ಎಲ್ಲಾ ಧರ್ಮವನ್ನು ಗೌರವಿಸಿ ಆದರಿಸಿಕೊಂಡು ಬಂದಿದೆ. ರಕ್ಷಾಬಂಧನ ಕಟ್ಟಿದ ಮಹಿಳೆಯರ ಜೊತೆ ಅಲ್ಲದೆ ಸಮಾಜದ ಕಟ್ಟಕಡೆಯ ಮಹಿಳೆಯರ ಜೊತೆಗೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸದಾ ಇದ್ದಾರೆ. ಅವರ ಸಂಕಷ್ಟಕ್ಕೆ ಸಹಾಯ ನೀಡುತ್ತಾರೆ ಮತ್ತು ಅವರ ಸಮಸ್ಯೆಗಳಿಗೆ ಸ್ಪಂದನೆ ನೀಡಲು ನಾನು ಸದಾ ನಿಮ್ಮ ಜೊತೆ ಇದ್ದೇನೆ ಎಂದು ಕಾಂಗ್ರೆಸ್ ಮುಖಂಡ ಮಿಥುನ್ ರೈ ಹೇಳಿದ್ದಾರೆ.
ಹಳೆಯಂಗಡಿಯ ಕಾಂಗ್ರೆಸ್ ಕಚೇರಿಯಲ್ಲಿ ಮುಲ್ಕಿ ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ನಡೆದ ರಕ್ಷಾಬಂಧನ ಕಾರ್ಯಕ್ರಮದಲ್ಲಿ ಅವರು ಮಹಿಳಾ ಕಾರ್ಯಕರ್ತರಿಂದ ರಕ್ಷಾ ಬಂಧನ ಕಟ್ಟಿಸಿಕೊಂಡು ಅವರು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಪದ್ಮಾವತಿ ಶೆಟ್ಟಿ ವಹಿಸಿ, ನಮಗೆ ಸದಾ ರಕ್ಷಣೆ ನೀಡುವ ಶ್ರೀ ಮಿಥುನ ರೈ ಅವರ ರಾಜಕೀಯ ಸಂಘಟನೆಗೆ ಮಹಿಳೆಯರು ಸದಾ ಕೈಜೋಡಿಸುತ್ತಾರೆ ಎಂದು ನುಡಿದರು.
ವೇದಿಕೆಯಲ್ಲಿ ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮೋಹನ್ ಕೋಟ್ಯಾನ್ ಕೆಪಿಸಿಸಿ ಕೋಆರ್ಡಿನೇಟರ್ ವಸಂತ ಬರ್ನಾಡ್, ಹಿಂದುಳಿದ ವರ್ಗಗಳ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಕುಮಾರ್ ಬೊಳ್ಳೂರು,ಯುವ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಪೂಜಾರ್, ಕೆಮ್ರಾಲ್ ಗ್ರಾಮ ಪಂಚಾಯತ್ ಅಧ್ಯಕ್ಷೆ ಲೀಲಾವತಿ, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಸುಗಂಧಿ ಕೊಂಡಾಣ, ಹಳೆಯಂಗಡಿ ಪ್ರಜಾಪ್ರತಿನಿಧಿ ಗೌರವ ಅಧ್ಯಕ್ಷ ಮಿರ್ಜಾ ಅಹ್ಮದ್ ಮೊದಲಾದವರು ಇದ್ದರು.
Kshetra Samachara
22/08/2021 05:33 pm