ಮಂಗಳೂರು:ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ವತಿಯಿಂದ ಆರೋಗ್ಯ ಸ್ವಯಂಸೇವಕರ ಅಭಿಯಾನ ಕಾರ್ಯಕ್ರಮ ನಡೆಯಿತು.
ಕೊರೊನಾ ಮಹಾಮಾರಿಯನ್ನು ಎದುರಿಸುವ ಬಗ್ಗೆ ಮತ್ತು ಮುಂದಿನ ದಿನಗಳಲ್ಲಿ ಬಿಜೆಪಿ ಕಾರ್ಯಕರ್ತರು ಮನೆಮನೆಗಳಿಗೆ ತಲುಪಿ, ಪ್ರತಿ ಹಳ್ಳಿಯಲ್ಲೂ ಒಬ್ಬ ಯುವಕ ಮತ್ತು ಮಹಿಳಾ ಕಾರ್ಯಕರ್ತರನ್ನು ಆರೋಗ್ಯ ಸ್ವಯಂಸೇವಕರಾಗಿ ಕೆಲಸ ನಿರ್ವಹಿಸಬೇಕು.
ಕೊರೊನಾ ಮಹಾಮಾರಿಯ ಸಂದರ್ಭದಲ್ಲಿ ಸೇವೆ ಮಾಡುವುದೇ ಈ ಅಭಿಯಾನದ ಉದ್ದೇಶ. ಇದಕ್ಕೆ ಬೇಕಾದ ತರಬೇತಿ ಮತ್ತು ಕೋವಿಡ್ ಕಿಟ್ ನ್ನು ವಿತರಿಸಲಾಯಿತು.
ಕಾರ್ಯಗಾರದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಸುದರ್ಶನ ಎಂ, ಬಿಜೆಪಿಯ ಸಂಘಟನಾ ಕಾರ್ಯದರ್ಶಿ ಪ್ರಸಾದ್ ಕುಮಾರ್, ಮಂಗಳೂರು ದಕ್ಷಿಣದ ಶಾಸಕರಾದ ವೇದವ್ಯಾಸ ಕಾಮತ್, ಕಾರ್ಯಗಾರದ ಸಂಚಾಲಕರಾದ ಈಶ್ವರ ಕಟೀಲ್, ಪ್ರಧಾನ ಕಾರ್ಯದರ್ಶಿಗಳು ಮತ್ತು ಎಲ್ಲಾ ಮಂಡಲದ ಆರೋಗ್ಯ ಸ್ವಯಂಸೇವಕರು ಉಪಸ್ಥಿತರಿದ್ದರು.
ಕಾರ್ಯಾಗಾರದ ತರಬೇತಿಯನ್ನು ವೈದ್ಯಾಧಿಕಾರಿಗಳು ನಡೆಸಿಕೊಟ್ಟರು.
Kshetra Samachara
24/08/2021 05:22 pm