ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಮೈಸೂರು ವಿದ್ಯಾರ್ಥಿನಿ ಗ್ಯಾಂಗ್ ರೇಪ್: ಎನ್ಎಸ್ ಯುಐ ಪ್ರತಿಭಟನೆ

ಮಂಗಳೂರು: ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಖಂಡಿಸಿ ಮಂಗಳೂರಿನಲ್ಲಿ ಎನ್ಎಸ್ ಯುಐ ವಿದ್ಯಾರ್ಥಿಗಳಿಂದ ಪ್ರತಿಭಟನೆ ನಡೆಯಿತು.

ನಗರದ ಕ್ಲಾಕ್ ಟವರ್ ಬಳಿ ಎನ್ಎಸ್ ಯುಐ‌ ವಿದ್ಯಾರ್ಥಿಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಅತ್ಯಾಚಾರ ನಡೆಸಿರುವ ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಒತ್ತಾಯಿಸಿದರು‌. ಆರೋಪಿಗಳ ಬಂಧನ ಮಾಡಲು ವಿಫಲವಾದ ರಾಜ್ಯ ಸರಕಾರದ ವಿರುದ್ಧ ಘೋಷಣೆ ಕೂಗಿದರು. ಈ ಸಂದರ್ಭ ಏಕಾಏಕಿ ರಸ್ತೆ ತಡೆ ನಡೆಸಲು ಮುಂದಾದ ವಿದ್ಯಾರ್ಥಿಗಳನ್ನು ಪೊಲೀಸರು ತಡೆದು, ಪ್ರತಿಭಟನೆಯನ್ನು ನಿಲ್ಲಿಸುವಂತೆ ಸೂಚನೆ ನೀಡಿದರು.

ಈ ಸಂದರ್ಭ ಎನ್ಎಸ್ ಯುಐ ಜಿಲ್ಲಾಧ್ಯಕ್ಷ ಸವಾದ್ ಸುಳ್ಯ ಮಾತನಾಡಿ, ಭೇಟಿ ಬಚಾವೋ, ಭೇಟಿ ಪಡಾವೋ ಎಂಬ ಹೇಳಿಕೆಗಳು ಕೇವಲ ಸರಕಾರ ಘೋಷವಾಕ್ಯವಾಗಿದೆ ಹೊರತು ವಿದ್ಯಾರ್ಥಿನಿಯರಿಗೆ, ಮಹಿಳೆಯರಿಗೆ ಯಾವುದೇ ಸುರಕ್ಷತೆ ಒದಗಿಸಲಾಗಿಲ್ಲ. ನಿರಂತರವಾಗಿ ಅತ್ಯಾಚಾರಗಳು ನಡೆಯುತ್ತಲೇ ಇದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರಕಾರ ವಿಫಲವಾಗಿದೆ. ಇದರ ಹೊಣೆ ಹೊತ್ತು ತಕ್ಷಣ ರಾಜ್ಯದ ಸಿಎಂ ಹಾಗೂ ಗೃಹ ಸಚಿವರು ರಾಜಿನಾಮೆ ನೀಡಲಿ ಎಂದು‌ ಆಗ್ರಹಿಸಿದರು.

Edited By : Manjunath H D
Kshetra Samachara

Kshetra Samachara

26/08/2021 05:43 pm

Cinque Terre

8.03 K

Cinque Terre

1

ಸಂಬಂಧಿತ ಸುದ್ದಿ