ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಟೀಲು: ಕೊರೊನಾ ಮೂರನೇ ಅಲೆ ಬಗ್ಗೆ ರಾಜ್ಯದಲ್ಲಿ ವಿಶೇಷ ಜಾಗೃತಿ: ನಳಿನ್ ಕುಮಾರ್ ಕಟೀಲ್

ಮುಲ್ಕಿ: ರಾಜಾಧ್ಯಕ್ಷರಾಗಿ ಎರಡು ವರ್ಷ ಪೂರೈಸಿರುವ ನಳಿನ್ ಕುಮಾರ್ ಕಟೀಲು ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭ ಪಬ್ಲಿಕ್ ನೆಕ್ಸ್ಟ್ ಜೊತೆ ಮಾತನಾಡಿ ರಾಜ್ಯದಲ್ಲಿ ಹಿರಿಯರ ಮಾರ್ಗದರ್ಶನದೊಂದಿಗೆ ಕೊರೊನಾ ದಿನಗಳಲ್ಲಿ ಯುವಕರ ಸಂಘಟನೆಯ ಮೂಲಕ ಯಶಸ್ವಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು ಎರಡು ಲಕ್ಷ ಜನರಿಗೆ ಔಷಧಿ ವಿತರಣೆ ಕಾರ್ಯ ನಡೆದಿದೆ. ಕೊರೊನಾ ಎರಡನೇ ಅಲೆಯ ಸಂದರ್ಭದಲ್ಲಿ ಕೊರೊನಾ ಸಂಕಷ್ಟಕ್ಕೀಡಾದವರಿಗೆ ಆಹಾರ ಪೊಟ್ಟಣ, ಲಸಿಕೆ ಕಾರ್ಯಕ್ರಮ ಯಶಸ್ವಿಯಾಗಿ ನಡೆದಿದೆ.

ಕೊರೊನಾ ದಿನಗಳಲ್ಲಿ ಸವಾಲು ಹಾಗೂ ಸಂಕಟವನ್ನು ಯಶಸ್ವಿಯಾಗಿ ನಿಭಾಯಿಸಿದ ಸಾರ್ಥಕತೆ ಇದೆ ಎಂದರು.

ಮುಂದಿನ ದಿನಗಳಲ್ಲಿ ಕೊರೋನಾ ಮೂರನೇ ಅಲೆ ಬಗ್ಗೆ ಎಚ್ಚರಿಕೆವಹಿಸುವುದರ ಜೊತೆಗೆ ರಾಜ್ಯಾದ್ಯಂತ ಪಕ್ಷ ಸಂಘಟನೆಗೆ ಒತ್ತು ನೀಡಲಾಗುವುದು ಎಂದರು.

ಈ ಸಂದರ್ಭ ಮುಲ್ಕಿ-ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್, ಮಂಡಲಾಧ್ಯಕ್ಷ ಸುನಿಲ್ ಆಳ್ವ, ಜಿಲ್ಲಾಧ್ಯಕ್ಷ ಸುದರ್ಶನ್ ಮತ್ತಿತರರು ಉಪಸ್ಥಿತರಿದ್ದರು.

Edited By : Manjunath H D
Kshetra Samachara

Kshetra Samachara

28/08/2021 12:15 pm

Cinque Terre

7.64 K

Cinque Terre

0

ಸಂಬಂಧಿತ ಸುದ್ದಿ