ಹೆಬ್ರಿ: ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಹೇಯ, ಅಮಾನವೀಯ ಕೃತ್ಯ. ಇದನ್ನು ಹೆಬ್ರಿ ಬ್ಲಾಕ್ ಕಾಂಗ್ರೆಸ್ ಖಂಡಿಸುತ್ತದೆ. ಈ ಘಟನೆ ನಡೆದು ನಲವತ್ತೆಂಟು ಗಂಟೆಗಳ ಬಳಿಕವೂ ಪೊಲೀಸ್ ಇಲಾಖೆ ಎಫ್ ಐಆರ್ ದಾಖಲಿಸದೆ ಕರ್ತವ್ಯಲೋಪ ಎಸಗಿದೆ.ರಾಜ್ಯದಲ್ಲಿ ವಿದ್ಯಾರ್ಥಿನಿಯರು ,ಮಹಿಳೆಯರು, ಮಕ್ಕಳು ಮತ್ತು ಜನಸಾಮಾನ್ಯರಿಗೆ ನ್ಯಾಯ ದೊರಕುತ್ತಿಲ್ಲ. ಕಾನೂನು ಸುವ್ಯವಸ್ಥೆ ಹದಗೆಟ್ಟು ಸರಕಾರದ ಮೇಲೆ ನಂಬಿಕೆ ಕಳೆದುಕೊಳ್ಳುವಂತಾಗಿದೆ. ಮೈಸೂರಲ್ಲಿ ನಡೆದ ಘಟನೆ ಮರುಕಳಿಸದಂತೆ ರಾಜ್ಯದ ಘನವೆತ್ತ ರಾಜ್ಯಪಾಲರು ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಈ ಸರಕಾರವನ್ನು ವಜಾಗೊಳಿಸಬೇಕು ಎಂದು ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುದ್ರಾಡಿ ಮಂಜುನಾಥ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅವರು ಹೆಬ್ರಿಯ ಬ್ಲಾಕ್ ಕಾಂಗ್ರೆಸ್ ಕಚೇರಿ ಎದುರುಗಡೆ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು.ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ನೀರೆ ಕೃಷ್ಣ ಶೆಟ್ಟಿ ಮಾತನಾಡಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದ ಮೇಲೆ ಮಹಿಳೆಯರ ಹಾಗೂ ವಿದ್ಯಾರ್ಥಿಗಳ ಮೇಲೆ ನಿರಂತರವಾಗಿ ದೌರ್ಜನ್ಯ ಪ್ರಕರಣ ಹೆಚ್ಚಾಗುತ್ತಿದೆ.ಮೈಸೂರಿನ ಪ್ರಕರಣದ ಬಗ್ಗೆ ಕೇಂದ್ರ ಸಚಿವೆ ಉಡುಪಿ ಜಿಲ್ಲಾ ಸಂಸದೆ ಶೋಭಾ ಕರಂದ್ಲಾಜೆ ಮಾತನಾಡುತ್ತಿಲ್ಲ .ರಾಜ್ಯದ ಗೃಹ ಸಚಿವರು ಬಾಯಿಗೆ ಬಂದ ಹಾಗೆ ಹಗುರವಾಗಿ ಮಾತನಾಡುತ್ತಾರೆ.ಇನ್ನಾದರೂ ಮೈಸೂರಿನಲ್ಲಿ ನಡೆದ ಪ್ರಕರಣದ ಬಗ್ಗೆ ಗಂಭೀರವಾಗಿ ತನಿಖೆ ನಡೆಸಿ ಗೃಹ ಸಚಿವರು ತಮ್ಮ ಘನತೆಯನ್ನು ಕಾಪಾಡಿಕೊಳ್ಳಲಿ ಎಂದು ಹೇಳಿದರು.
ಹೆಬ್ರಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರಂಜನಿ ಹೆಬ್ಬಾರ್ ,ಪಕ್ಷದ ಮಹಿಳಾ ಮುಖಂಡರು ,ಹೆಬ್ರಿ ಯುವ ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಶೆಟ್ಟಿ, ಹೆಬ್ರಿ ಸೇರಿದಂತೆ ವಿವಿಧ ಗ್ರಾಮ ಪಂಚಾಯತ್ ಸದಸ್ಯರುಗಳು ,ಪಕ್ಷದ ಪ್ರಮುಖರು ಹಾಗೂ NSUI ವಿದ್ಯಾರ್ಥಿ ಘಟಕದ ಸದಸ್ಯರು ಮತ್ತು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
Kshetra Samachara
28/08/2021 04:28 pm