ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ನಮ್ಮ ಸಮುದಾಯಕ್ಕೆ ಮಂತ್ರಿ ಸ್ಥಾನ ನೀಡದಿದ್ದರೆ ಹೋರಾಟ: ವಿಶ್ವಕರ್ಮ ಮಹಾಸಭಾ

ಉಡುಪಿ: ರಾಜ್ಯದಲ್ಲಿ ವಿಶ್ವಕರ್ಮ ಸಮಾಜವನ್ನು ಬಲಿಷ್ಠವಾಗಿ ಕಟ್ಟಿ, ಸಮಾಜ ನಾಯಕರಾದ, ಹಿಂದುಳಿದ ವರ್ಗಗಳ ನಾಯಕರಾದ ಕೆ.ಪಿ.ನಂಜುಂಡಿಯವರಿಗೆ ಸಚಿವ ಸ್ಥಾನ ನೀಡಬೇಕು.ಇಲ್ಲದಿದ್ದರೆ ಹೋರಾಟದ ಹಾದಿ ಹಿಡಿಯುತ್ತೇವೆ ಎಂದು ವಿಶ್ವಕರ್ಮ ಸಮಾಜದ ಮುಖಂಡರು ಎಚ್ಚರಿಕೆ ನೀಡಿದ್ದಾರೆ.

ಉಡುಪಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಮುಖಂಡರು, ರಾಜ್ಯದ ಬಿಜೆಪಿ ಸರಕಾರದ ಮೇಲೆ ಭರವಸೆ ಇರಿಸಿಕೊಂಡಿದ್ದವು. ಆದರೆ ನಮಗೆ ಯಾವುದೇ ವ್ಯವಸ್ಥೆಯನ್ನು ಮಾಡಿಕೊಡುತ್ತಿಲ್ಲ. ಇನ್ನಾದರೂ ಶೀಘ್ರುವಾಗಿ ನ್ಯಾಯ ನೀಡಬೇಕೆಂದು ಮುಖ್ಯಮಂತ್ರಿಗಳಲ್ಲಿ ಒತ್ತಾಯಿಸುತ್ತೇವೆ ಎಂದು ಹೇಳಿದ್ದಾರೆ.

ನಮ್ಮ ನಾಯಕರಾದ ವಿಧಾನ ಪರಿಷತ್ ಸದಸ್ಯ ಕೆ.ಪಿ.ನಂಜಂಡಿಯವರು ರಾಜ್ಯದ ೨೨೪ ವಿಧಾನಸಭಾ ಕ್ಷೇತ್ರದಲ್ಲಿ ಸಂಚಾರ ಮಾಡಿ, ಆಗಿರುವ ಅನ್ಯಾಯದ ಬಗ್ಗೆ ವಿಶ್ವಕರ್ಮ ಸಮಾಜದ ಮಂದಿಗೆ ಮನವರಿಕೆ ಮಾಡಿಕೊಡುವ ಮೂಲಕ ಸಮಾಜದ ಸಂಘಟನೆಯನ್ನು ಇನ್ನಷ್ಟು ಪ್ರಬಲವಾಗಿ ಮಾಡಲಿದ್ದಾರೆ, ಬಿಜೆಪಿಯನ್ನು ನಂಬಿ ಬೆಂಬಲಿಸಿದ ವಿಶ್ವಕರ್ಮರಿಗೆ ಬಿಜೆಪಿಯಿಂದಲೇ ಅನ್ಯಾಯವಾಗುತ್ತಿದೆ. ನಮ್ಮ ವಿಶ್ವಕರ್ಮ ಸಮಾಜದ ಉನ್ನತಿಗಾಗಿ ದುಡಿಯುತ್ತಿರುವ ನಮ್ಮೆಲ್ಲರ ಶಕ್ತಿಯೂ ಆಗಿರುವ ನಾಯಕ ಕೆ.ಪಿ.ನಂಜುಂಡಿಯವರಿಗೆ ಶಕ್ತಿ ಕೊಡಿ, ವಿಶ್ವಕರ್ಮ ಸಮಾಜವನ್ನು ಸಂಕಷ್ಟದಿಂದ ಪಾರು ಮಾಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಮತ್ತು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡುತ್ತೇನೆ. ಇಲ್ಲವಾದರೆ ಕೇಂದ್ರದ ನಾಯಕರನ್ನು ಬೇಟಿ ಮಾಡಿ ನಮ್ಮ ಸಮುದಾಯಕ್ಕೆ ಆಗಿರುವ ಅನ್ಯಾಯವನ್ನು ವಿವರಿಸಿ ನ್ಯಾಯ ಕೇಳುತ್ತೇವೆ.ಹೋರಾಟ ಮಾಡುತ್ತೇವೆ ಎಂದು ಮುಖಂಡರು ಎಚ್ಚರಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ರಾಮಕೃಷ್ಣ ಆಚಾರ್ಯ ಕೋಟ.ನಾರಾಯಣ ಆಚಾರ್ಯ ಬೈಂದೂರು,ಗಂಗಾಧರ ಆಚಾರ್ಯ ಬಾರ್ಕೂರು,ರಾಜೇಶ್ ಆಚಾರ್ಯ ಬೈಂದೂರು,ಸುಶಾಂತ್ ಆಚಾರ್ಯ ಬೈಂದೂರು ಉಪಸ್ಥಿತರಿದ್ದರು.

Edited By : Nagesh Gaonkar
Kshetra Samachara

Kshetra Samachara

30/08/2021 03:38 pm

Cinque Terre

13.52 K

Cinque Terre

1

ಸಂಬಂಧಿತ ಸುದ್ದಿ