ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದ ತೆಂಕನಿಡಿಯೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೆಳಾರ್ಕಳಬೆಟ್ಟಿ ನ ಸರ್ಕಾರಿ ಜಾಗದಲ್ಲಿ 40 ವರ್ಷಗಳಿಂದ ವಾಸ್ತವ್ಯವಿರುವವರಿಗೆ 94/CC ಅಡಿ ಹಕ್ಕುಪತ್ರ ನೀಡಲು ಸಮಸ್ಯೆ ಉಂಟಾಗಿದ್ದು, ಇಂದು ಶಾಸಕ ರಘುಪತಿ ಭಟ್ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ತೆಂಕನಿಡಿಯೂರು ಗ್ರಾಮ ಪಂಚಾಯತ್ ಸದಸ್ಯರಾದ ಗೀತಾ ಶೆಟ್ಟಿ, ಎ.ಪಿ.ಎಂ.ಸಿ ಸದಸ್ಯರಾದ ಉಮೇಶ್ ಶೆಟ್ಟಿ, ತೆಂಕನಿಡಿಯೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಕೃಷ್ಣಯ್ಯ ಶೆಟ್ಟಿ, ಸ್ಥಳೀಯರಾದ ಮನೋಹರ್ ಶೆಟ್ಟಿ, ಅಣ್ಣಯ್ಯ ನಾಯಕ್ ಹಾಗೂ ಉಡುಪಿ ತಹಶೀಲ್ದಾರರಾದ ಪ್ರದೀಪ್ ಕುರ್ಡೆಕರ್, ಕಂದಾಯ ನಿರೀಕ್ಷಕರಾದ ಉಪೇಂದ್ರ, ಗ್ರಾಮ ಲೆಕ್ಕಾಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
30/08/2021 06:54 pm