ಉಡುಪಿ: ಕೆಂಗೇರಿ ಮೆಟ್ರೋ ಉದ್ಘಾಟನೆ ವೇಳೆ ಕನ್ನಡಕ್ಕೆ ಅವಮಾನ ಮಾಡಿದ್ದನ್ನು ಸರಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಇಂಧನ ,ಕನ್ನಡ ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.
ಈ ವಿಷಯಕ್ಕೆ ಸಂಬಂಧಪಟ್ಟಂತೆ ಅಧಿಕಾರಿಗಳಿಂದ ವಿವರಣೆ ನೀಡುವಂತೆ ಕೇಳಲಾಗಿದೆ. ಭಾಷೆಯ ವಿಚಾರದಲ್ಲಿ ಅಧಿಕಾರಿಗಳ ನಿರ್ಲಕ್ಷವನ್ನು ಸಹಿಸುವುದಿಲ್ಲ.ಕಾರ್ಯಕ್ರಮದ ಬ್ಯಾಕ್ ಡ್ರಾಪ್ ನ ಮೇಲೆ ಕನ್ನಡ ಇರಲಿಲ್ಲ.ಈ ಸಂಬಂಧ ವ್ಯವಸ್ಥಾಪನಾ ನಿರ್ದೇಶಕರಿಗೆ ಸರಕಾರದಿಂದ ನೋಟಿಸ್ ಜಾರಿಯಾಗಿದೆ ಎಂದು ಹೇಳಿದ್ದಾರೆ.
ಸರಕಾರಿ ಕಾರ್ಯಕ್ರಮಗಳಲ್ಲಿ ಕನ್ನಡವನ್ನು ನಿರ್ಲಕ್ಷಿಸುವುದು ಅಪರಾಧ ಎಂದ ಅವರು, ಕಾರ್ಯಕ್ರಮದ ಆಯೋಜಕರು ಕೂಡಲೇ ಈ ಬಗ್ಗೆ ಸ್ಪಷ್ಟೀಕರಣ ನೀಡಬೇಕು.ತಪ್ಪಿತಸ್ಥರಾಗಿದ್ದರೆ ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು.ರಾಜ್ಯದ ಎಲ್ಲ ಸರ್ಕಾರಿ ಕಾರ್ಯಕ್ರಮಗಳಲ್ಲಿ ಕನ್ನಡ ಭಾಷೆಗೆ ಮಾನ್ಯತೆ ನೀಡಬೇಕು.
ಕನ್ನಡಿಗರ ಭಾವನೆಗೆ ಧಕ್ಕೆ ಆಗದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು. ಎಂದು ಇಂಧನ ಮತ್ತು ಕನ್ನಡ ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.
Kshetra Samachara
01/09/2021 04:17 pm