ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ ಮೂಡಬಿದ್ರೆ ಕ್ಷೇತ್ರದಲ್ಲಿ ಬಿಜೆಪಿಯಿಂದ ಬಪ್ಪ ನಾಡಿನಲ್ಲಿ ನಾಮಫಲಕ ಅಳವಡಿಸುವ ಮೂಲಕ ಪಕ್ಷ ಸಂಘಟನೆಗೆ ಚಾಲನೆ

ಮುಲ್ಕಿ:ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕನಸಿನಂತೆ ಮುಲ್ಕಿ-ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ನಗರ ಪಂಚಾಯತ್ ವ್ಯಾಪ್ತಿಯ ಬಪ್ಪ ನಾಡು ಬೂತ್ ಅಧ್ಯಕ್ಷ ಪುರುಷೋತ್ತಮ ರಾವ್ ಮನೆಯಲ್ಲಿ ನಾಮಫಲಕ ಅಳವಡಿಸುವ ಕಾರ್ಯಕ್ರಮಕ್ಕೆ ಶಾಸಕ ಉಮಾನಾಥ ಕೋಟ್ಯಾನ್ ಚಾಲನೆ ನೀಡಿದರು

ಈ ಸಂದರ್ಭ ಶಾಸಕ ಉಮಾನಾಥ ಕೋಟ್ಯಾನ್ ಮಾತನಾಡಿ ಬೂತ್ ಅಧ್ಯಕ್ಷರ ಮನೆಯಲ್ಲಿ ನಾಮಫಲಕ ಅಳವಡಿಸುವ ಮುಖಾಂತರ ಪಕ್ಷ ಸಂಘಟನೆಗೆ ಒತ್ತು ನೀಡುವ ಮೂಲಕ ಕಾರ್ಯಕರ್ತರ ಸಮಸ್ಯೆಗಳನ್ನು ಆಲಿಸಿ ಸರಕಾರದ ಯೋಜನೆಗಳನ್ನು ಹಳ್ಳಿಹಳ್ಳಿಗೆ ತಲುಪಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.

ಈ ಸಂದರ್ಭ ಮಂಡಲಾಧ್ಯಕ್ಷ ಸುನಿಲ್ ಆಳ್ವ,ಮಾಜೀ ಜಿಪಂ ಉಪಾಧ್ಯಕ್ಷೆ ಕಸ್ತೂರಿ ಪಂಜ, ಬಿಜೆಪಿ ನಾಯಕರಾದ ಈಶ್ವರ ಕಟೀಲು, ಜಯಾನಂದ, ಮುಲ್ಕಿ ನಪಂ ಅಧ್ಯಕ್ಷ ಸುಭಾಷ್ ಶೆಟ್ಟಿ, ರಂಗನಾಥ ಶೆಟ್ಟಿ, ಕೇಶವ ಕಟೀಲು, ರಮಾನಾಥ ಪೈ, ಮತ್ತಿತರರು ಉಪಸ್ಥಿತರಿದ್ದರು

ಮುಲ್ಕಿ-ಮೂಡಬಿದ್ರೆ ಕ್ಷೇತ್ರದಲ್ಲಿ ಸುಮಾರು 221 ಬೂತ್ ಗಳಲ್ಲಿ ನಾಮಫಲಕ ಅಳವಡಿಸಲಾಗುವುದು ಎಂದು ಪಕ್ಷದ ಪ್ರಕಟಣೆ ತಿಳಿಸಿದೆ

Edited By : Manjunath H D
Kshetra Samachara

Kshetra Samachara

03/09/2021 12:59 pm

Cinque Terre

9.05 K

Cinque Terre

1

ಸಂಬಂಧಿತ ಸುದ್ದಿ