ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: "ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ": ಅಭಯಚಂದ್ರ ಜೈನ್

ಮುಲ್ಕಿ: ಮುಲ್ಕಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ನಗರ ಪಂಚಾಯತ್ ವ್ಯಾಪ್ತಿಯ ಕಾಂಗ್ರೆಸ್ ಪ್ರಜಾಪ್ರತಿನಿಧಿ ಸಮಿತಿಯ ಪದಗ್ರಹಣ ಸಮಾರಂಭ ಮುಲ್ಕಿಯ ಲಲಿತ್ ಮಹಲ್ ಕಟ್ಟಡದ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಮಾಜಿ ಸಚಿವ ಅಭಯಚಂದ್ರ ಜೈನ್ ಉದ್ಘಾಟಿಸಿ ಮಾತನಾಡಿ ಕಾರ್ಯಕರ್ತರು ಸಂಘಟನೆಯ ಮೂಲಕ ಮೋಸದ ಹೇಳಿಕೆಗಳನ್ನು ನೀಡಿ ಜನರ ದಿಕ್ಕು ತಪ್ಪಿಸುವ ಬಿಜೆಪಿ ವಿರುದ್ಧ ಹೋರಾಟಕ್ಕೆ ಸಿದ್ಧರಾಗಬೇಕು. ದೇಶದ ಪ್ರಧಾನಿ ಅಚ್ಚೇ ದಿನ್ ಹೇಳಿಕೊಂಡು ಬೆಲೆ ಏರಿಕೆ ಮೂಲಕ ದೇಶದ ಪ್ರಜೆಗಳಿಗೆ ಗಾಯದ ಮೇಲೆ ಬರೆ ಹೇಳಿದ್ದಾರೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದಿಂದ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದರು.

ಮುಲ್ಕಿ-ಮೂಡಬಿದ್ರೆ ಕ್ಷೇತ್ರದ ಚುನಾವಣಾ ಉಸ್ತುವಾರಿ ಮಿಥುನ್ ರೈ ನೂತನ ಪ್ರಜಾಪ್ರತಿನಿಧಿ ಸಮಿತಿಯ ಅಧ್ಯಕ್ಷರಾದ ಜನಾರ್ಧನ ಬಂಗೇರ ಹಾಗೂ ಪದಾಧಿಕಾರಿಗಳಿಗೆ ಕಾಂಗ್ರೆಸ್ ಧ್ವಜ ಹಸ್ತಾಂತರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್ ವಹಿಸಿದ್ದರು.

ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ರಘುರಾಜ್ ಕದ್ರಿ ದಿಕ್ಸೂಚಿ ಭಾಷಣ ಮಾಡಿ ದೇಶದಲ್ಲಿ ದೌಲತ್ ಕಾಯ್ದೆ ಜಾರಿಯಲ್ಲಿದ್ದು ಒಡೆದು ಆಳುವ ನೀತಿಯನ್ನು ವಿರೋಧಿಸುವವರ ಧ್ವನಿ ಅಡಗಿಸುವ ಯತ್ನ ಕೇಂದ್ರ ಮಾಡುತ್ತಿದ್ದು ಹೋರಾಟಕ್ಕೆ ಕಾರ್ಯಕರ್ತರು ಸಜ್ಜಾಗಬೇಕು ಎಂದರು.

ವೇದಿಕೆಯಲ್ಲಿ ಮುಖ್ಯಅತಿಥಿಗಳಾಗಿ ಕೆಪಿಸಿಸಿ ಕೋಆರ್ಡಿನೇಟರ್ ವಸಂತ್ ಬೆರ್ನಾಡ್, ಯುವ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಪೂಜಾರ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪದ್ಮಾವತಿ ಶೆಟ್ಟಿ, ಕೆಪಿಸಿಸಿ ಹಿಂದುಳಿದವರ್ಗದ ಕಾರ್ಯದರ್ಶಿ ಪ್ರವೀಣ್ ಬೊಳ್ಳೂರು, ಪುತ್ತುಬಾವ,ಮಹಾಬಲ ಸನಿಲ್, ಶೈಲಾ ಸಿಕ್ವೇರ, ಯೋಗೀಶ್ ಕೋಟ್ಯಾನ್ ಮಂಜುನಾಥ ಕಂಬಾರ, ಮುನ್ನ ಯಾನೆ ಮಹೇಶ ಮತ್ತಿತರರು ಉಪಸ್ಥಿತರಿದ್ದರು.

Edited By : Manjunath H D
Kshetra Samachara

Kshetra Samachara

05/09/2021 03:18 pm

Cinque Terre

7.15 K

Cinque Terre

1

ಸಂಬಂಧಿತ ಸುದ್ದಿ