ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಜನಸಾಮಾನ್ಯರಿಗೆ ಸೌಲಭ್ಯ ದೊರಕುವಂತೆ ಮಾಡುವ ಅವಶ್ಯಕತೆ ಇದೆ : ಶಾಸಕ ರಘುಪತಿ ಭಟ್

ಉಡುಪಿ: ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಲ್ಲಿನ ಕೆಲವೊಂದು ತಾಂತ್ರಿಕ ಸಮಸ್ಯೆಗಳಿಂದ ಜನಸಾಮಾನ್ಯರು ಇಲಾಖೆ ನೀಡುವ ಸೌಲಭ್ಯಗಳನ್ನು ಪಡೆಯುವಲ್ಲಿ ವಂಚಿತರಾಗುತ್ತಿದ್ದಾರೆ. ಇದನ್ನು ಸರಿಪಡಿಸಿ ಸುಲಭವಾಗಿ ಜನರಿಗೆ ಸೌಲಭ್ಯ ದೊರಕುವಂತೆ ಮಾಡುವ ಅವಶ್ಯಕತೆ ಇದೆ ಎಂದು ಶಾಸಕ ರಘುಪತಿ ಭಟ್ ಹೇಳಿದರು.

ಕರ್ನಾಟಕ ಸರ್ಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ, ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಇಂದು ಉಡುಪಿಯ ಅಮೃತ್ ಗಾರ್ಡನ್ ನಲ್ಲಿ ನಡೆದ "ಅಂತ್ಯೋದಯ" ಇಲಾಖೆಗಳ ವಿವಿಧ ಯೋಜನೆಗಳ ರಾಜ್ಯ ಮಟ್ಟದ ಮಾಹಿತಿ ಕಾರ್ಯಾಗಾರದ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜನರ ಕಲ್ಯಾಣಕ್ಕಾಗಿ ಸರ್ಕಾರ ಹಲವಾರು ಕಾರ್ಯಕ್ರಮಗಳನ್ನು ಹಾಕಿಕೊಂಡರೂ ಅತಿಯಾದ ದಾಖಲೆಗಳನ್ನು ಸಲ್ಲಿಸಬೇಕಾಗಿದ್ದು, ಇವರಲ್ಲಿ ಅದರ ಅರಿವಿನ ಕೊರತೆಯಿಂದ ದಾಖಲೆ ಸಲ್ಲಿಸಲು ಸಾಧ್ಯವಾಗದೆ ಅರ್ಹ ಫಲಾನುಭವಿಗಳು ಸೌಲಭ್ಯಗಳನ್ನು ಪಡೆಯುವಲ್ಲಿ ವಂಚಿತರಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿ ಸರಕಾರದ ಸವಲತ್ತುಗಳು ಸುಲಭವಾಗಿ ಜನರಿಗೆ ತಲುಪುವಂತಹ ವ್ಯವಸ್ಥೆಯನ್ನು ಇಲಾಖೆಯಲ್ಲಿ ಕಲ್ಪಿಸಬೇಕಾಗಿದೆ ಎಂದು ಹೇಳಿದ ಅವರು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸಮುದಾಯದವರಿಗೆ ತಮ್ಮ ಜಾಗದಲ್ಲಿ ವಾಣಿಜ್ಯ ಸಂಕೀರ್ಣಗಳನ್ನು ನಿರ್ಮಿಸಲು ಜಿಲ್ಲಾಧಿಕಾರಿ ಮಟ್ಟದಲ್ಲಿ ಭೂ ಪರಿವರ್ತನೆಗೆ ಅವಕಾಶ ಕಲ್ಪಿಸಬೇಕೆಂದು ವಿನಂತಿಸಿದರು.

Edited By : Nirmala Aralikatti
Kshetra Samachara

Kshetra Samachara

08/09/2021 03:06 pm

Cinque Terre

7.21 K

Cinque Terre

0

ಸಂಬಂಧಿತ ಸುದ್ದಿ