ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಲಿಂಗಾಯತ ಪಂಚಮಸಾಲಿ ಮೀಸಲಾತಿ ನೀಡುತ್ತೇವೆ ಎಂಬ ಸರಕಾರ ಕೊಟ್ಟ ಮಾತನ್ನು ಉಳಿಸಲಿ: ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ

ಮಂಗಳೂರು: ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಹಾಗೂ ಎಲ್ಲಾ ಲಿಂಗಾಯತ ಸಮಾಜವನ್ನು ಒಬಿಸಿ ಮೀಸಲಾತಿಗೆ ಸೇರ್ಪಡೆಗೆ ಒತ್ತಾಯಿಸಲಾಗಿತ್ತು. ಆದರೆ ರಾಜ್ಯ ಸರಕಾರ ಅದಕ್ಕಾಗಿ ಆರು ತಿಂಗಳ ಕಾಲಾವಧಿ ಕೇಳಿದ್ದು, ಇದೀಗ ಕಾಲಾವಧಿ ಮುಕ್ತಾಯವಾಗುತ್ತಿದ್ದು, ಅಧಿವೇಶನದಲ್ಲಿ ಕೊಟ್ಟ ಮಾತಿನಂತೆ ರಾಜ್ಯ ಸರಕಾರ ನ್ಯಾಯವನ್ನು ಒದಗಿಸಲೇಬೇಕೆಂದು ಧರ್ಮಕ್ಷೇತ್ರ ಕೂಡಲಸಂಗಮದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ಒತ್ತಾಯಿಸಿದರು.

ನಗರದ ಬಲ್ಮಠದಲ್ಲಿರುವ ಆರ್ಯಸಮಾಜದಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಸರಕಾರ ಕೊಟ್ಟ ಮಾತನ್ನು ಉಳಿಸಬೇಕೆಂದು ರಾಜ್ಯಾದ್ಯಂತ ಪ್ರತಿಜ್ಞಾ ಪಂಚಾಯತ್ ಬೃಹತ್ ರಾಜ್ಯ ಅಭಿಯಾನ ಕೈಗೊಳ್ಳಲಾಗಿದೆ. ಈ ಅಭಿಯಾನ ಅಕ್ಟೋಬರ್ 1 ಕ್ಕೆ ಮುಕ್ತಾಯಗೊಳ್ಳುತ್ತದೆ. ಆ ಬಳಿಕವೂ ಮೀಸಲಾತಿ ನೀಡಲು ರಾಜ್ಯ ಸರಕಾರ ವಿಳಂಬ ಮಾಡಿದಲ್ಲಿ ಬೆಂಗಳೂರು ಫ್ರೀಡಂ ಪಾರ್ಕ್ ನಲ್ಲಿ ಧರಣಿ ಸತ್ಯಾಗ್ರಹ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು‌.

ಈಗಾಗಲೇ ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಕಾರವಾರ, ಉಡುಪಿ ಮುಗಿಸಿ ಇಂದು ಮಂಗಳೂರಿಗೆ ಬಂದಿದ್ದೇವೆ. ನೂತನ ಸಿಎಂ ಬಸವರಾಜ ಬೊಮ್ಮಾಯಿಯವರ‌ ಬಗ್ಗೆ ನಮಗೆ ನಂಬಿಕೆಯಿದೆ. ನಮ್ಮ ಪಾದಯಾತ್ರೆ ಸಂದರ್ಭದಲ್ಲಿ ನಮಗೆ ಬಹಳ ಸಹಕಾರ ನೀಡಿದ್ದರು‌. ಅವರ ಅವಧಿಯೊಳಗೆ ಮೀಸಲಾತಿ ಕೊಡುತ್ತಾರೆಂದು ನಾವು ಭಾವಿಸಿದ್ದೇವೆ ಎಂದು ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.

Edited By : Nagesh Gaonkar
Kshetra Samachara

Kshetra Samachara

08/09/2021 09:30 pm

Cinque Terre

37.79 K

Cinque Terre

0

ಸಂಬಂಧಿತ ಸುದ್ದಿ