ಬಜಪೆ: ಮಂಗಳೂರು ಗ್ರಾಮಾಂತರ ಪಡುಪೆರಾರ ಗ್ರಾಮ ಪಂಚಾಯತ್ ಮುರ ಬಾಲವಾಡಿ ಅಂಗನವಾಡಿ ಕೇಂದ್ರದ ನೂತನ ಕಟ್ಟಡವನ್ನು ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ. ವೈ ಭರತ್ ಶೆಟ್ಟಿ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಜಿ.ಪಂ ಸದಸ್ಯ ಜನಾರ್ದನ ಗೌಡ ಮುಚ್ಚೂರು, ಪಡು ಪೆರಾರ ಗ್ರಾ.ಪಂ. ಅಧ್ಯಕ್ಷೆ ಅಮಿತಾ ಮೋಹನ್ ಶೆಟ್ಟಿ, ಉಪಾಧ್ಯಕ್ಷೆ ಸೇಸಮ್ಮ, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಹರೀಶ್ ಕೆ, ಪಂ.ಅಭಿವೃದ್ದಿ ಅಧಿಕಾರಿ ಉಗ್ಗಪ್ಪ ಮೂಲ್ಯ, ಬಾಲವಿಕಾಸ ಸಮಿತಿ ಅಧ್ಯಕ್ಷೆ ಶ್ರೀಮತಿ ದೇವಕಿ, ಅಂಗನವಾಡಿ ಮೇಲ್ವಿಚಾರಕಿ ಸುಜಾತ, ಪಂ.ಸದಸ್ಯರು ಉಪಸ್ಥಿತರಿದ್ದರು.
Kshetra Samachara
11/09/2021 01:30 pm