ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೂಡಬಿದ್ರೆ: 'ಪಕ್ಷ ಸಂಘಟನೆಯೊಂದಿಗೆ ಕಾಂಗ್ರೆಸ್ಸನ್ನು ಅಧಿಕಾರಕ್ಕೆ ತರಲು ಶ್ರಮಿಸಿ'

ಮೂಡಬಿದ್ರೆ: ಮೂಡಬಿದ್ರೆ ಸಮೀಪದ ವಾಲ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಯುವ ಕಾಂಗ್ರೆಸ್ ಗ್ರಾಮ ಸಮಿತಿಯನ್ನು ಮೂಡಬಿದ್ರೆ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಜಯಕುಮಾರ್ ಶೆಟ್ಟಿ ನೇತೃತ್ವದಲ್ಲಿ ನಡೆಸಲಾಯಿತು.

ಈ ಸಂದರ್ಭ ಅವರು ಮಾತನಾಡಿ, ಪಕ್ಷ ಸಂಘಟನೆ ಮೂಲಕ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರಲು ಕಾರ್ಯಕರ್ತರು ಶ್ರಮಿಸಬೇಕು ಎಂದರು.

ಈ ವೇಳೆ ಪಂಚಾಯತ್ ಸದಸ್ಯರಾದ ಅರುಣ್ ಕುಮಾರ್ ಶೆಟ್ಟಿ, ಶ್ರೀಧರ ಬಂಗೇರ, ಸುಕುಮಾರ ಜೈನ್, ಶಿವಾನಂದ ಪಾಂಡ್ರು, ಶಂಕರ, ರಾಜೇಶ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು. ಯುವ ಕಾಂಗ್ರೆಸ್ ವಾಲ್ಪಾಡಿ ಗ್ರಾಮ ಸಮಿತಿಯ ನೂತನ ಅಧ್ಯಕ್ಷರಾಗಿ ಪವನ್ ಶೆಟ್ಟಿ, ಉಪಾಧ್ಯಕ್ಷರಾಗಿ ಮಹಮ್ಮದ್ ಇಕ್ಬಾಲ್, ಶಂಕರ ಪೂಜಾರಿ, ಪ್ರಧಾನ ಕಾರ್ಯದರ್ಶಿಯಾಗಿ ನಾಗೇಶ್ ಶೆಟ್ಟಿ, ಕಾರ್ಯದರ್ಶಿಯಾಗಿ ಯಾಕೂಬ್ ವಾಲ್ಪಾಡಿ, ಸಿಪ್ರಿಯನ್ ಡಿಸೋಜ. ಆಯ್ಕೆಯಾದರು.

Edited By : PublicNext Desk
Kshetra Samachara

Kshetra Samachara

11/09/2021 09:00 pm

Cinque Terre

4.36 K

Cinque Terre

0

ಸಂಬಂಧಿತ ಸುದ್ದಿ