ಉಡುಪಿ: ತೆಂಕನಿಡಿಯೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಉದ್ದಿನಹಿತ್ಲು ವಿನ ರಸ್ತೆ ಅಭಿವೃದ್ಧಿಗೆ ಶಾಸಕ ಕೆ. ರಘುಪತಿ ಭಟ್ ರ ಶಿಫಾರಸಿನ ಮೇರೆಗೆ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿ 3.05 ಕೋಟಿ ರೂ. ಮಂಜೂರಾಗಿದೆ.ಈ ರಸ್ತೆ ಕಾಮಗಾರಿಗೆ ಇಂದು ಶಾಸಕ ಕೆ ರಘುಪತಿ ಭಟ್ ಗುದ್ದಲಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಉಡುಪಿ ನಗರ ಸಭೆಯ ಸದಸ್ಯರುಗಳಾದ ವಿಜಯ್ ಕೊಡವೂರು, ಶ್ರೀಷ ಕೊಡವೂರು, ಜಯಂತಿ, ಮಂಜುಳಾ ನಾಯಕ್, ತೆಂಕನಿಡಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಗಾಯತ್ರಿ, ಉಪಾಧ್ಯಕ್ಷರಾದ ಅರುಣ್ ಜತ್ತನ್ ಹಾಗೂ ತೆಂಕನಿಡಿಯೂರು ಗ್ರಾಮ ಪಂಚಾಯತ್ ಸದಸ್ಯರು, ನಗರ ಸಭೆಯ ನಾಮ ನಿರ್ದೇಶಿತ ಸದಸ್ಯರಾದ ದಿನೇಶ್ ಪೈ, ಉಡುಪಿ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಶರತ್ ಬೈಲಕೆರೆ ಮತ್ತು ಪಕ್ಷದ ಕಾರ್ಯಕರ್ತರು, ಸ್ಥಳೀಯರು ಉಪಸ್ಥಿತರಿದ್ದರು.
Kshetra Samachara
12/09/2021 05:29 pm