ಉಡುಪಿ: ಕೇಂದ್ರ ಮಾಜಿ ಸಚಿವ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಆಸ್ಕರ್ ಫೆರ್ನಾಂಡಿಸ್ ಅವರ ನಿಧನಕ್ಕೆ ಉಡುಪಿ-ಚಿಕ್ಕಮಗಳೂರು ಸಂಸದೆ, ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಸಂತಾಪ ಸೂಚಿಸಿದ್ದಾರೆ.
ಸರಳ ಸಜ್ಜನ ನಾಯಕರಾಗಿ ರಾಷ್ಟ್ರ ಮಟ್ಟದಲ್ಲಿ ತಮ್ಮ ಛಾಪನ್ನು ಮೂಡಿಸಿದ್ದ ಅವರು ಉಡುಪಿ ಸಂಸದರಾಗಿ ಹಲವಾರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು, ಅವರ ಸೇವೆ ಸ್ಮರಣೀಯ ಎಂದು ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.
ದೇವರು ಅವರಿಗೆ ಚಿರಶಾಂತಿ ಕರುಣಿಸಲಿ ಹಾಗೂ ಅವರ ಬಂಧು-ಮಿತ್ರರಿಗೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Kshetra Samachara
13/09/2021 06:00 pm