ಉಡುಪಿ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಉಡುಪಿಗೆ ಆಗಮಿಸಿದ್ದಾರೆ.ಆಸ್ಕರ್ ಫೆರ್ನಾಂಡಿಸ್ ಅವರ ಅಂತಿಮ ದರ್ಶನ ಪಡೆಯಲು ಡಿಕೆಶಿ ಇಲ್ಲಿಗೆ ಆಗಮಿಸಿದ್ದು ಬ್ರಹ್ಮಗಿರಿಯ ಕಾಂಗ್ರೆಸ್ ಕಚೇರಿಗೆ ಆಗಮಿಸಿ ಆಸ್ಕರ್ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು.
ಇದೇ ವೇಳೆ ಡಿಕೆಶಿ, ಆಸ್ಕರ್ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.ಡಿಕೆಶಿ ಜೊತೆಗೆ ಮಾಜಿ ಸಚಿವ ಅಭಯ ಚಂದ್ರ ಜೈನ್ ಸಹಿತ ಹಲವು ನಾಯಕರು ಆಗಮಿಸಿದ್ದಾರೆ.
ನೂರಾರು ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ಭವನಕ್ಕೆ ಆಗಮಿಸಿ ಆಸ್ಕರ್ ಫರ್ನಾಂಡೀಸ್ ಅವರಿಗೆ ಅಂತಿಮ ನಮನ ಸಲ್ಲಿಸಿದರು.
Kshetra Samachara
14/09/2021 12:35 pm