ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಇಂಧನ ಸಚಿವ ಸುನಿಲ್ ಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ

ಉಡುಪಿ: ಇಂಧನ ಕನ್ನಡ ಹಾಗೂ ಸಂಸ್ಕೃತಿ ಸಚಿವ ವಿ ಸುನಿಲ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಇಂದು ಬೆಂಗಳೂರಿನಲ್ಲಿ ಮೆಸ್ಕಾಂ ವ್ಯಾಪ್ತಿಗೆ ಬರುವ ವಿಧಾನಸಭಾ ಕ್ಷೇತ್ರಗಳ ಶಾಸಕರುಗಳ ಸಭೆ ಆಯೋಜಿಸಲಾಗಿತ್ತು.

ಈ ಸಭೆಯಲ್ಲಿ ಇಂಧನ ಇಲಾಖೆಗೆ ಸಂಬಂಧಪಟ್ಟ ಹಾಗೆ ಮೆಸ್ಕಾಂ ವ್ಯಾಪ್ತಿಯಲ್ಲಿ ಎದುರಾಗುತ್ತಿರುವ ಸಮಸ್ಯೆಗಳು ಮತ್ತು ಅದಕ್ಕೆ ಪರಿಹಾರೋಪಾಯಗಳನ್ನು ಕುರಿತಂತೆ ಚರ್ಚೆ ನಡೆಸಲಾಯಿತು. ಸಭೆಯಲ್ಲಿ ಶಾಸಕರು ಪ್ರಸ್ತಾಪಿಸಿದ ಸಮಸ್ಯೆಗಳ ಬಗ್ಗೆ ಸೂಕ್ತ

ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಸಚಿವ ಸುನಿಲ್ ಕುಮಾರ್ ಸೂಚಿಸಿದರು.

ಗೃಹ ಸಚಿವ ಆರಗ ಜ್ಞಾನೇಂದ್ರ ಸೇರಿದಂತೆ ಮೆಸ್ಕಾಂ ವ್ಯಾಪ್ತಿಗೆ ಸೇರಿದ ಶಾಸಕರು , ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜಿ ಕುಮಾರ್ ನಾಯಕ್, ಡಾ. ಎನ್ ಮಂಜುಳಾ ಹಾಗೂ ಇಲಾಖೆಯ ಇತರ ಉನ್ನತ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

15/09/2021 06:10 pm

Cinque Terre

23.22 K

Cinque Terre

1

ಸಂಬಂಧಿತ ಸುದ್ದಿ