ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ : ಯಾವುದೇ ಸಮುದಾಯ- ಧರ್ಮಕ್ಕೆ ನೋವುಂಟುಮಾಡಿದರೆ ನಮಗೆ ಒಳ್ಳೆಯದಾಗಲ್ಲ: ಸಚಿವೆ ಶೋಭಾ ಅಚ್ಚರಿಯ ಹೇಳಿಕೆ!

ಉಡುಪಿ: ರಾಜ್ಯದಲ್ಲಿ ದೇಗುಲ ಧ್ವಂಸ ವಿಚಾರವನ್ನು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಖಂಡಿಸಿದ್ದಾರೆ. ಉಡುಪಿಯಲ್ಲಿ ಈ ಕುರಿತು ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ದೇವಸ್ಥಾನ ,ಮಸೀದಿ, ಚರ್ಚುಗಳು ನಮ್ಮ ಶ್ರದ್ಧಾ ಕೇಂದ್ರಗಳು.ಅವುಗಳ ರಕ್ಷಣೆ ನಮ್ಮ ಜವಾಬ್ದಾರಿ.ಅಕ್ರಮ ಸ್ಥಳದಲ್ಲಿ ಶೃದ್ಧಾಕೇಂದ್ರಗಳಿದ್ದರೆ ಪೂರ್ವ ಸೂಚನೆ ನೀಡಿ, ಸ್ಥಳೀಯ ಜನರ ಮನವೊಲಿಸಿ ಪರ್ಯಾಯ ವ್ಯವಸ್ಥೆ ಕಲ್ಪಿಸಿ ತೆರವು ಮಾಡುವ ಬಗ್ಗೆ ಸರಕಾರ ಯೋಚಿಸಬೇಕು ಅಂತ ಒತ್ತಾಯಿಸಿದ್ದಾರೆ.

ಶ್ರದ್ಧಾ ಕೇಂದ್ರಗಳ ಬಗ್ಗೆ ಜನರಿಗೆ ನಂಬಿಕೆ, ಭಕ್ತಿ ಭಾವ ಪ್ರೀತಿ ಜಾಸ್ತಿ ಇರುತ್ತೆ. ಅವರ ಭಾವನೆಗೆ ನೋವಾದಾಗ ಪ್ರತಿಭಟನೆ ನಡೆಸುತ್ತಾರೆ. ಯಾವುದೇ ಸಮುದಾಯ- ಧರ್ಮಕ್ಕೆ ನೋವುಂಟುಮಾಡಿದರೆ ನಮಗೆ ಒಳ್ಳೆಯದಾಗಲ್ಲ. ಅಕ್ರಮ ದೇವಾಲಯ ಕಂಡು ಬಂದರೆ ಊರಿನ ಜನರ ಮನವೊಲಿಸಿ.ಇದು ರಾಜ್ಯ ಸರಕಾರಕ್ಕೆ ನನ್ನ ಪ್ರಾರ್ಥನೆ ಎಂದು ಕೇಂದ್ರ ಕೃಷಿ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ‌ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

Edited By : Shivu K
Kshetra Samachara

Kshetra Samachara

17/09/2021 01:00 pm

Cinque Terre

11.33 K

Cinque Terre

4

ಸಂಬಂಧಿತ ಸುದ್ದಿ