ಉಡುಪಿ: ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಇವತ್ತು ಕೊರಗ ಜನಾಂಗದ ಮನೆಗಳಿಗೆ ತೆರಳಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ,ಅವರಿಗೆ ಆಹಾರ ಕಿಟ್ ವಿತರಣೆ ಮಾಡಿದರು.ಆಹಾರ ಸಾಮಗ್ರಿ ವಿತರಣೆ ಬಳಿಕ ಮಾತನಾಡಿದ ಸಚಿವರು ,
ಪ್ರಧಾನಿ ಮೋದಿ ಇಂದು 71ನೇ ವರ್ಷಕ್ಕೆ ಕಾಲಿರಿಸುತ್ತಿದ್ದಾರೆ.
ದೇಶದ ಬಡಜನರ ಸೇವೆ ಅವರಿಗೆ ಪ್ರಿಯವಾದದ್ದು. ಸೇವಾಚಟುವಟಿಕೆ ನಡೆಸಿದರೆ ಅವರಿಗೆ ಮುದಕೊಡುತ್ತದೆ.ಈ ಹಿನ್ನೆಲೆಯಲ್ಲಿ
ಬೇರೆ-ಬೇರೆ ರೀತಿಯ ಸೇವಾ ಚಟುವಟಿಕೆಯಲ್ಲಿ ಬಿಜೆಪಿ ತೊಡಗಿಸಿಕೊಂಡಿದೆ.
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹುಟ್ಟುಹಬ್ಬದ ಶುಭಾಶಯ ಹೇಳಿದ ಸಚಿವರು,ದೇಶದ ರಕ್ಷಣೆ ಮತ್ತು ಗೌರವ ಹೆಚ್ಚಿಸಲು ದೇವರು ಅವರಿಗೆ ಶಕ್ತಿ ನೀಡಲಿ.ಶ್ರೀಕೃಷ್ಣ- ಚಾಮುಂಡೇಶ್ವರಿ ದೇವರಲ್ಲಿ ನಾನು ಪ್ರಾರ್ಥಿಸುತ್ತೇನೆ ಎಂದು ಹೇಳಿದರು.
Kshetra Samachara
17/09/2021 01:28 pm