ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೂಡುಬಿದಿರೆ: ಬಿಜೆಪಿಯಿಂದ ಸೇವೆ, ಸಮರ್ಪಣೆ ಅಭಿಯಾನ

ಮೂಡುಬಿದಿರೆ: ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಬಿಜೆಪಿ ಮೂಡುಬಿದಿರೆ ನಗರ ಮಹಾಶಕ್ತಿ ಕೇಂದ್ರದ ವತಿಯಿಂದ 20 ದಿನಗಳು ನಡೆಯುವ ಸೇವೆ ಮತ್ತು ಸಮರ್ಪಣೆ ಅಭಿಯಾನಕ್ಕೆ ಮೂಡುವೇಣುಪುರ ಶ್ರೀವೆಂಕಟರಮಣ ದೇವಳದಲ್ಲಿ ಶುಕ್ರವಾರ ಚಾಲನೆ ನೀಡಲಾಯಿತು. ಮೋದಿ ಹುಟ್ಟುಹಬ್ಬದ ಅಂಗವಾಗಿ ದೇವಳದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ಬಿಜೆಪಿ ಮೂಲ್ಕಿ ಮೂಡುಬಿದಿರೆ ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲ ಶೆಟ್ಟಿಗಾರ್ ಮಾತನಾಡಿ, ಅಕ್ಟೋಬರ್ 7ರವರೆಗೆ ಮಂಡಲದ ಬೂತ್ ಮಟ್ಟದಲ್ಲಿ ವಿವಿಧ ಸೇವಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ. ಎಲ್ಲ ಬೂತ್‌ಗಳಲ್ಲಿ 100 ಮಂದಿಯನ್ನು ಸೇರಿಸಿ ಪ್ರಧಾನಿಯವರಿಗೆ ಪೋಸ್ಟ್ ಕಾರ್ಡ್ ಮೂಲಕ ಶುಭಾಶಯ ಕೋರುವ ಕಾರ್ಯಕ್ರವು ನಡೆಯಲಿದೆ ಎಂದರು.

ಮೂಡುಬಿದಿರೆ ಹನುಮಂತ, ವೆಂಕಟರಮಣ ದೇವಳದ ಆಡಳಿತ ಮೊಕ್ತೇಸರ ಜಿ.ಉಮೇಶ್ ಪೈ, ಬಿಜೆಪಿ ನಗರ ಮಹಾ ಶಕ್ತಿಕೇಂದ್ರ ಅಧ್ಯಕ್ಷ ಲಕ್ಷಣ್ ಪೂಜಾರಿ, ಕಾರ್ಯದರ್ಶಿ ಸಾತ್ವಿಕ್ ಮಲ್ಯ, ಪುರಸಭೆಯ ಅಧ್ಯಕ್ಷ ಪ್ರಸಾದ್ ಕುಮಾರ್, ಉಪಾಧ್ಯಕ್ಷೆ ಸುಜಾತಾ ಶಶಿಕಿರಣ್, ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ನಾಗರಾಜ ಪೂಜಾರಿ, ಮೂಡ ಅಧ್ಯಕ್ಷ ಮೇಘನಾಥ್ ಶೆಟ್ಟಿ, ಮಂಡಲ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶ್ವೇತಾ ಪ್ರವೀಣ್ ಜೈನ್, ಪುರಸಭೆ ಸದಸ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.

Edited By : Manjunath H D
Kshetra Samachara

Kshetra Samachara

17/09/2021 07:13 pm

Cinque Terre

14.87 K

Cinque Terre

0

ಸಂಬಂಧಿತ ಸುದ್ದಿ