ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಂಟ್ವಾಳ: ವಾಮದಪದವು ವಲಯ ಕಾಂಗ್ರೆಸ್ ಸಮಿತಿಯಿಂದ ಆಹಾರ ಕಿಟ್ ವಿತರಣೆ

ಬಂಟ್ವಾಳ: ಬಂಟ್ವಾಳ ತಾಲೂಕು ವಾಮದಪದವು ವಲಯ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಮಾಜಿ ಸಚಿವ ಬಿ. ರಮಾನಾಥ ರೈ ಹುಟ್ಟು ಹಬ್ಬದ ಪ್ರಯುಕ್ತ ಕೊರೊನಾ ವಾರಿಯರ್ಸ್ ಮತ್ತಿತರರಿಗೆ ಕಿಟ್ ವಿತರಣಾ ಕಾರ್ಯಕ್ರಮ ವಾಮದಪದವು ಕರಿಮಲೆ ದಿ.ರಮೇಶ್ ಪೈ ಸಭಾಭವನದಲ್ಲಿ ಜರಗಿತು.

ಅಧ್ಯಕ್ಷತೆ ವಹಿಸಿದ್ದ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಅವರು ಮಾತನಾಡಿ, ಮಾಜಿ ಸಚಿವ ರಮಾನಾಥ ರೈ ಅವರು ವಾಮದಪದವು ವ್ಯಾಪ್ತಿಯಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ನಡೆಸಿದ್ದಾರೆ ಎಂದರು.

ಜಿ.ಪಂ. ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ವಾಮದಪದವು ಕಾಂಗ್ರೆಸ್ ಸಮಿತಿ ಸಂಘಟನಾತ್ಮಕವಾಗಿ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವುದು ಅಭಿನಂದನೀಯ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಅಜ್ಜಿಬೆಟ್ಟು ಮಾಗಣೆ ತಂತ್ರಿ ಶ್ರೀಪಾದ ಪಾಂಗಣ್ಣಾಯ, ಬಂಟ್ವಾಳ ಭೂ ಅಭಿವೃದ್ಧಿ ಬ್ಯಾಂಕ್ ಮಾಜಿ ಅಧ್ಯಕ್ಷ ಸುದರ್ಶನ್ ಜೈನ್ , ಚೆನ್ನೈತ್ತೋಡಿ ಗ್ರಾ.ಪಂ. ಅಧ್ಯಕ್ಷೆ ಭಾರತಿ ರಾಜೇಂದ್ರ ಶುಭ ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

17/09/2021 08:08 pm

Cinque Terre

5.51 K

Cinque Terre

0

ಸಂಬಂಧಿತ ಸುದ್ದಿ