ಬಂಟ್ವಾಳ: ಪ್ರಧಾನಿ ಜನ್ಮದಿನಾಚರಣೆ- ಬಿಜೆಪಿ ಬಂಟ್ವಾಳದಿಂದ ಸ್ವಚ್ಛತಾ ಕಾರ್ಯಕ್ರಮ

ಬಂಟ್ವಾಳ: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನಾಚರಣೆ ನಿಮಿತ್ತ ಬಿಜೆಪಿಯ ಬಂಟ್ವಾಳದ ಕಾರ್ಯಕರ್ತರು ಬಿ.ಸಿ.ರೋಡ್ ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ನಡೆಸಿದರು.

ಬಿಜೆಪಿ ಬಂಟ್ವಾಳ ಮಂಡಲದ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರ 71ನೇ ಹುಟ್ಟುಹಬ್ಬದ ಪ್ರಯುಕ್ತ ಈ ದಿನ ಬಿ.ಸಿ.ರೋಡಿನಲ್ಲಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಕಾರ್ಯಕ್ರಮಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷರಾದ ಸುದರ್ಶನ್.ಎಂ, ಜಿಲ್ಲಾ ಪ್ರಭಾರಿ ರಾಜೇಶ್ ಕಾವೇರಿ, ಹಿಂದುಳಿದ ವರ್ಗ ಮೋರ್ಚಾದ ಜಿಲ್ಲಾಧ್ಯಕ್ಷ ಆರ್.ಸಿ. ನಾರಾಯಣ ಆಗಮಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಬಂಟ್ವಾಳ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ದೇವದಾಸ್ ಶೆಟ್ಟಿ, ಪ್ರದಾನ ಕಾರ್ಯದರ್ಶಿಗಳಾದಡೊಂಬಯ್ಯ ಅರಳ, ರವೀಶ್ ಕರ್ಕಳ, ಚಿದಾನಂದ ರೈ ಪಾಲ್ಗೊಂಡಿದ್ದರು.

Kshetra Samachara

Kshetra Samachara

1 month ago

Cinque Terre

3.58 K

Cinque Terre

0