ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಳೆಯಂಗಡಿ: "ಆಸ್ಕರ್ ಫರ್ನಾಂಡಿಸ್ ವ್ಯಕ್ತಿಯಲ್ಲ ಶಕ್ತಿಯಾಗಿದ್ದರು": ಅಭಯಚಂದ್ರ ಜೈನ್

ಮುಲ್ಕಿ: ಮುಲ್ಕಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕಾಂಗ್ರೆಸ್ಸಿನ ರಾಷ್ಟ್ರೀಯ ನಾಯಕರಾದ, ಮಾಜಿ ಕೇಂದ್ರ ಸಚಿವ ಹಾಗೂ ರಾಜ್ಯಸಭಾ ಸದಸ್ಯರಾಗಿದ್ದ ಆಸ್ಕರ್ ಫೆರ್ನಾಂಡಿಸ್ ರವರಿಗೆ ಶೃದ್ಧಾಂಜಲಿ ಸಭೆ ಶನಿವಾರ ಹಳೆಯಂಗಡಿಯ ಮುಲ್ಕಿ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ನಡೆಯಿತು.

ಸಭೆಯಲ್ಲಿ ಮಾಜೀ ಸಚಿವರಾದ ಕೆ ಅಭಯಚಂದ್ರ ಜೈನ್ ಮಾತನಾಡಿ ರಾಷ್ಟ್ರ ರಾಜಕೀಯದಲ್ಲಿ ಆಸ್ಕರ್ ಕೊಡುಗೆ ಅಪಾರ, ಅವರು ವ್ಯಕ್ತಿಯಲ್ಲ ಶಕ್ತಿಯಾಗಿದ್ದರು. ಹಗಲು-ರಾತ್ರಿ ಎನ್ನದೆ ಪಕ್ಷಕ್ಕಾಗಿ ದುಡಿದ ಧೀಮಂತ ನಾಯಕರಾಗಿದ್ದು ಬಡವರ ಬಂಧುವಾಗಿದ್ದರು. ಅವರ ನಾಯಕತ್ವದ ಗುಣಗಳನ್ನು ಇಂದಿನ ಯುವ ಜನಾಂಗ ಮುಂದುವರಿಸಿಕೊಂಡು ಹೋಗಬೇಕಾಗಿದೆ ಎಂದರು.

ಯುವ ಕಾಂಗ್ರೆಸ್ಸಿನ ನಾಯಕ ಮಿಥುನ್ ರೈ ಮಾತನಾಡಿ ದಕ್ಷಿಣಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಆಸ್ಕರ್ ಕೊಡುಗೆ ಅಪಾರ, ಅನೇಕ ಸಂಸ್ಥೆಗಳನ್ನು ಹುಟ್ಟುಹಾಕಿ ಬಡವರಿಗೆ ಅನ್ನದಾತರಾಗಿದ್ದರು ಎಂದರು.

ಈ ಸಂದರ್ಭ ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್ ಶಿಮಂತೂರು, ಕೆಪಿಸಿಸಿ ಕೋ ಆರ್ಡಿನೇಟರ್ ವಸಂತ ಬೆರ್ನಾಡ್, ಕೆಪಿಸಿಸಿ ಹಿಂದುಳಿದ ವರ್ಗದ ಕಾರ್ಯದರ್ಶಿ ಪ್ರವೀಣ್ ಬೊಳ್ಳೂರು, ಯುವ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಪೂಜಾರ, ಮಾಜಿ ಮ.ನ.ಪಾ. ಸದಸ್ಯೆ ಪ್ರತಿಭಾ ಕುಳಾಯಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪದ್ಮಾವತಿ ಶೆಟ್ಟಿ, ಎಪಿಎಂಸಿ ಸದಸ್ಯ ಪ್ರಮೋದ್ ಕುಮಾರ್, ಮತ್ತಿತರರು ಉಪಸ್ಥಿತರಿದ್ದರು.

ಬಳಿಕ ಸಭೆಯಲ್ಲಿ ಮೌನ ಪ್ರಾರ್ಥನೆ ಮೂಲಕ ಆಸ್ಕರ್ ಫರ್ನಾಂಡೀಸ್ ರವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು.

Edited By : Shivu K
Kshetra Samachara

Kshetra Samachara

18/09/2021 02:13 pm

Cinque Terre

6.1 K

Cinque Terre

1

ಸಂಬಂಧಿತ ಸುದ್ದಿ