ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದೇವಾಲಯಗಳ ಧ್ವಂಸ ವಿರೋಧಿಸಿ ಮುಲ್ಕಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ನಾಳೆ ಕಾಲ್ನಡಿಗೆ ಜಾಥ

ಮುಲ್ಕಿ: ರಾಜ್ಯ ಸರ್ಕಾರದ ಆದೇಶದ ಮೇರೆಗೆ ನಂಜನಗೂಡಿನ ದೇವಾಲಯಗಳ ಧ್ವಂಸದ ಕೃತ್ಯ ನಡೆದಿದ್ದು ಇದನ್ನು ವಿರೋಧಿಸಿ ಮುಲ್ಕಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸಪ್ಟೆಂಬರ್ 22 (ನಾಳೆ) ಬೃಹತ್ ಕಾಲ್ನಡಿಗೆ ಜಾಥಾ ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಸಮೀಪದ ಕೊಲ್ನಾಡಿನಿಂದ ಬಪ್ಪನಾಡು ವರೆಗೆ ನಡೆಯಲಿದೆ ಎಂದು ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ ತಿಳಿಸಿದರು.

ಅವರು ಹಳೆಯಂಗಡಿಯ ಮುಲ್ಕಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಮಾಜಿ ಸಚಿವ ಅಭಯಚಂದ್ರ ಜೈನ್ ಮತ್ತು ಇತರ ಕಾಂಗ್ರೆಸ್ ನಾಯಕರ ನೇತೃತ್ವದಲ್ಲಿ ಪಾವಂಜೆ ದೇವಸ್ಥಾನ, ಚರ್ಚ್ ಹಾಗೂ ಮಸೀದಿಗಳಿಗೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಬೃಹತ್ ಕಾಲ್ನಡಿಗೆ ಜಾಥಾ ನಡೆಯಲಿದೆ.

ನಂಜನಗೂಡಿನಲ್ಲಿ ರಾಜ್ಯ ಸರಕಾರದ ಆದೇಶದ ಮೇರೆಗೆ ದೇವಸ್ಥಾನಗಳನ್ನು ಧ್ವಂಸ ಮಾಡುವ ಪ್ರಕ್ರಿಯೆ ನಡೆದಿದ್ದು ಇದರ ಹೊಣೆಗಾರಿಕೆ ಯಾರು ಎಂಬುದೇ ಪ್ರಶ್ನೆಯಾಗಿದೆ. ಇನ್ನು ಮುಂದಕ್ಕೆ ರಾಜ್ಯದಲ್ಲಿ ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅನೇಕ ಧಾರ್ಮಿಕ ಕೇಂದ್ರಗಳನ್ನು ತೆರವು ಮಾಡಲು ರಾಜ್ಯ ಸರಕಾರ ಮುಂದಾಗಿದ್ದು, ಸರಕಾರ ಒಂದು ಕಣ್ಣಿಗೆ ಬೆಣ್ಣೆ ಒಂದು ಕಣ್ಣಿಗೆ ಸುಣ್ಣದ ನಡೆಯ ವಿರುದ್ಧ ಬೃಹತ್ ಕಾಲ್ನಡಿಗೆ ಜಾಥಾದ ಮುಖಾಂತರ ಸರಕಾರದ ಮುಖವಾಡ ಬಯಲಿಗೆ ಎಳೆಯಲಿದ್ದೇವೆ ಎಂದರು.

ರಾಮಮಂದಿರ ನಿರ್ಮಾಣದ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಆದೇಶದಂತೆ ರಾಮಮಂದಿರ ನಿರ್ಮಾಣ ತನ್ನ ಸಾಧನೆ ಎಂದು ಹೇಳಿಕೊಂಡ ಸರಕಾರ ಇದೀಗ ದೇವಸ್ಥಾನದ ಧ್ವಂಸ ವಿಚಾರದಲ್ಲಿ ಸುಪ್ರೀಂ ಕೋರ್ಟ್ ನ ಆದೇಶ ಎಂದು ಹೇಳಿಕೊಂಡು ಜನರನ್ನು ಮೂರ್ಖರನ್ನಾಗಿಸಲು ಹೊರಟಿದೆ.

ಈಗಿನ ಬಿಜೆಪಿ ಸರಕಾರ ಧರ್ಮದ ವಿಷಯದಲ್ಲಿ ರಾಜಕೀಯ ವಿಷಬೀಜ ಬಿತ್ತಿ ಜನರಿಗೆ ವಂಚನೆ ಮಾಡಲು ಯತ್ನಿಸುತ್ತಿದ್ದು ಜನವಿರೋಧಿ ಸರಕಾರಕ್ಕೆ ನಾಳೆಯ ಬೃಹತ್ ಕಾಲ್ನಡಿಗೆ ಜಾಥಾದ ಪ್ರತಿಭಟನೆ ಮೂಲಕ ಎಚ್ಚರಿಕೆ ನೀಡುತ್ತಿದ್ದೇವೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್, ಕೆಪಿಸಿಸಿ ಕೋಆರ್ಡಿನೇಟರ್ ವಸಂತ್ ಬೆರ್ನಾಡ್, ಕೆಪಿಸಿಸಿ ಹಿಂದುಳಿದವರ್ಗದ ಕಾರ್ಯದರ್ಶಿ ಪ್ರವೀಣ್ ಬೊಳ್ಳೂರು, ಯುವ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಪೂಜಾರ, ಮುಲ್ಕಿ ನಪಂ ಸದಸ್ಯ ಯೋಗೀಶ್ ಕೋಟ್ಯಾನ್, ಪ್ರಜಾಪ್ರತಿನಿಧಿ ಪಕ್ಷದ ಅಧ್ಯಕ್ಷ ಜನಾರ್ದನ ಬಂಗೇರ ಮತ್ತಿತರರು ಉಪಸ್ಥಿತರಿದ್ದರು.

Edited By : Nagesh Gaonkar
Kshetra Samachara

Kshetra Samachara

21/09/2021 03:43 pm

Cinque Terre

8.13 K

Cinque Terre

0

ಸಂಬಂಧಿತ ಸುದ್ದಿ