ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೈಂದೂರು ಕಾಂಗ್ರೆಸ್ ನಿಂದ ಬೆಲೆ ಏರಿಕೆ ಖಂಡಿಸಿ ಸಿಲಿಂಡರ್ ನಲ್ಲಿ ಕಟ್ಟಿಗೆ ಇರಿಸಿ ಅಡುಗೆ ಮಾಡಿ ಪ್ರತಿಭಟನೆ!

ಬೈಂದೂರು : ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಉಡುಪಿ ಜಿಲ್ಲೆಯ ಬೈಂದೂರು ತಹಶೀಲ್ದಾರ್ ಕಛೇರಿಯೆದುರು ಕಾಂಗ್ರೆಸ್ ಕಾರ್ಯಕರ್ತರು ಸಿಲಿಂಡರ್ ನಲ್ಲಿ ಕಟ್ಟಿಗೆ ಇಟ್ಟು ಅಡುಗೆ ಮಾಡುವುದರ ಮೂಲಕ ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.

ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಬೈಂದೂರು ಮಾಜಿ ಶಾಸಕ ಗೋಪಾಲ ಪೂಜಾರಿ , ಇದು ಜನಸಾಮಾನ್ಯರು, ಬಡವರ ಪರ ಇರುವ ಸರ್ಕಾರ ಅಲ್ಲ.ಬಡವರ ರಕ್ತ ಹೀರುವ ಸರ್ಕಾರ.ಜನ ಕೊರೋನಾ ಸಂಕಷ್ಟದಿಂದಾಗಿ ಆರ್ಥಿಕ ಸಮಸ್ಯೆಗಳಿಂದ ಸಾಯುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಗಾಯದ ಮೇಲೆ ಬರೆ ಎಳೆದಂತೆ ಪೆಟ್ರೋಲ್ ಮತ್ತು ಅಡುಗೆ ಅನಿಲದ ಬೆಲೆಯನ್ನು ದಿನದಿಂದ ದಿನಕ್ಕೆ ಹೆಚ್ಚಿಸಿದರೆ ಬಡವರು ಬದುಕುವುದು ಹೇಗೆ? ಎಂದು ಪ್ರಶ್ನಿಸಿದರು. ಪ್ರಧಾನಿ ಮೋದಿ ನೇತೃತ್ವದ ಎನ್ ಡಿಎ ಸರ್ಕಾರಕ್ಕೆ ಜನಸಾಮಾನ್ಯರ ಮೇಲೆ ಕಾಳಜಿಯಿದ್ದರೆ ಇಂಧನದ ಮೇಲಿನ ಸುಂಕವನ್ನು ಕಡಿಮೆ ಮಾಡಲಿ.ರಾಜ್ಯ ಸರ್ಕಾರ ಕೂಡ ಮಾಡಲಿ. ಇಲ್ಲದಿದ್ದರೆ ಜನ ಬದುಕುವುದು ಬಹಳ ಕಷ್ಟವಾಗುತ್ತದೆ. ಪೆಟ್ರೋಲ್,ಡೀಸೆಲ್ ಬೆಲೆ ಹೆಚ್ಚಳವಾದ ಕೂಡಲೇ ಸಾಗಣೆ-ಸಾಗಾಟ ದರ ಹೆಚ್ಚಳವಾಗಿ ಎಲ್ಲ ಅಗತ್ಯ ವಸ್ತುಗಳ ಬೆಲೆ ಕೂಡ ಹೆಚ್ಚಳವಾಗುತ್ತದೆ.ದೇಶದಲ್ಲಿ ಬಿಜೆಪಿ ಸರ್ಕಾರ ನರಕ ಸೃಷ್ಟಿಸುತ್ತಿದೆ. ಜನರಿಗೆ ತಪ್ಪು ಮಾಹಿತಿ ನೀಡಿ, ಸುಳ್ಳು ಹೇಳಿ ನರೇಂದ್ರ ಮೋದಿ ಅಧಿಕಾರ ಮಾಡುತ್ತಿದ್ದಾರೆ. ಮೋದಿ ಈ ದೇಶದ ಜನರ ರಕ್ತ ಹೀರುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಕೊನೆಗೆ ಬೈಂದೂರು ತಹಶೀಲ್ದಾರ್ ಶೋಭಾಲಕ್ಷ್ಮೀ ಅವರ ಮೂಲಕ ಮನವಿ ಸಲ್ಲಿಸಲಾಯಿತು.

Edited By : Nagesh Gaonkar
Kshetra Samachara

Kshetra Samachara

22/09/2021 03:44 pm

Cinque Terre

23.45 K

Cinque Terre

2

ಸಂಬಂಧಿತ ಸುದ್ದಿ