ಮಂಗಳೂರು: ನಗರದಲ್ಲಿ ಕದ್ರಿ ಉದ್ಯಾನವನವನ್ನು ಬಿಟ್ಟರೆ ಪ್ರಶಸ್ತವಾದ ಯಾವುದೇ ಪಾರ್ಕ್ ಇಲ್ಲ. ಆದ್ದರಿಂದ ನಗರ ವ್ಯಾಪ್ತಿಯಲ್ಲಿ ವಿವಿಧೆಡೆ ಪಾರ್ಕ್‌ಗಳನ್ನು ಅಭಿವೃದ್ಧಿ ಪಡಿಸುವ ಅಗತ್ಯವಿದೆ. ಈಗಾಗಲೇ ಸುಮರು 43 ಕಡೆಗಳಲ್ಲಿ ಜಾಗ ಗುರುತಿಸಲಾಗಿದ್ದು, ಯೋಜನೆ ಪ್ರಗತಿಯಲ್ಲಿದೆ ಎಂದು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರವಿಶಂಕರ್ ಮಿಜಾರು ತಿಳಿಸಿದ್ದಾರೆ.
ಪೇಜ್ ಸಂಸ್ಥೆಯಿಂದ ನಗರದ ಕದ್ರಿ ಉದ್ಯಾನವನದಲ್ಲಿ ಹಮ್ಮಿಕೊಳ್ಳಲಾಗಿರುವ ವಿಶ್ವ ಅಲ್ಜಿಮರ್ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪಾರ್ಕ್‌ಗಳಿದ್ದಲ್ಲಿ ನಗರದ ಸೌಂದರ್ಯ ಇಮ್ಮಡಿಗೊಳ್ಳುವುದು ಮಾತ್ರವಲ್ಲ ಸಂಜೆ, ಬೆಳಗ್ಗಿನ ಸಮಯದಲ್ಲಿ ಹಿರಿಯರು ಪಾರ್ಕ್‌ಗಳಿಗೆ ಭೇಟಿ ನೀಡಿ, ಆಹ್ಲಾದಕರ ಅನುಭವ ಪಡೆಯಬಹುದು. ಇದರಿಂದ ಅವರ ಮಾನಸಿಕ ಆರೋಗ್ಯ ಸದೃಢವಾಗಲು ಸಾಧ್ಯ. ಆದ್ದರಿಂದ ಈ ಕಾರ್ಯಕ್ಕೆ ಸಂಘಸಂಸ್ಥೆಗಳು ಹಾಗೂ ಸಾವಜರ್ನಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು.
ಮಂಗಳೂರು ಮನಪಾ ಮೇಯರ್ ಪ್ರೇಮಾನಂದ ಶೆಟ್ಟಿ ಮಾತನಾಡಿ, ಮಂಗಳೂರು ಮನಪಾ ವ್ಯಾಪ್ತಿಯಲ್ಲಿ ಹಲವು ಯೋಜನೆ, ಸೌಲಭ್ಯಗಳು ಮುಂದಿನ ದಿನಗಳಲ್ಲಿ ಬರಲಿವೆ. ಮ್ಯೂಸಿಕ್ ಥೆರಪಿ ಸಹಿತ ಹಲವು ಸೌಲಭ್ಯಗಳನ್ನು ಒದಗಿಸಲಾಗುತ್ತದೆ. ಅಲ್ಜಿಮರ್ ನಂತಹ ಕಾಯಿಲೆಯನ್ನು ಮೊದಲ ಹಂತದಲ್ಲೇ ಪತ್ತೆ ಹಚ್ಚುವ ಕಾರ್ಯ ಆಗಬೇಕು. ಈ ಬಗ್ಗೆ ಜನಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಹೇಳಿದರು.
Kshetra Samachara
22/09/2021 09:33 pm