ಉಡುಪಿ: ರಾಜ್ಯದಲ್ಲಿ ಗೋ ಹತ್ಯೆ ನಿಷೇದ ಕಾಯಿದೆ ಜಾರಿಯಲ್ಲಿದೆ. ಗೋಶಾಲೆಗಳನ್ನು ಜಿಲ್ಲೆ ಮತ್ತು ತಾಲೂಕಿನಲ್ಲಿ ತೆರೆಯಲಾಗುತ್ತದೆ.
ಪಶು ಸಂಗೋಪನ ಇಲಾಖೆ, ಧಾರ್ಮಿಕ ದತ್ತಿ ಇಲಾಖೆ ಈ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ.
ಗೋವುಗಳ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ.
ಗೋವು ರಕ್ಷಣೆಯಲ್ಲಿ ಅಧಿಕಾರಿಗಳ ಲೋಪ ಮಾಡಿದ್ದರೆ ಅದನ್ನು ಸರಿ ಮಾಡುತ್ತೇವೆ ಎಂದು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ.
ಉಡುಪಿಯಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಚಿವರು ,ಗೋಹತ್ಯೆ ನಿಷೇಧ ಕಾಯ್ದೆ ಅನುಷ್ಠಾನ ಮಾಡುವಲ್ಲಿ ಲೋಪವಾಗಬಾರದು.
ಗೋಹತ್ಯೆ ಆದೇಶವನ್ನು ಕಡ್ಡಾಯವಾಗಿ ಅನುಷ್ಠಾನಕ್ಕೆ ತನ್ನಿ ಎಂದುಪೊಲೀಸ್ ಅಧಿಕಾರಿಗಳಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಾಕೀತು ಮಾಡಿದರು.
ಅಲ್ಲಲ್ಲಿ ಗೋಶಾಲೆ ನಿರ್ಮಾಣಕ್ಕೆ ಜಾಗಗಳನ್ನು ಗೊತ್ತು ಮಾಡಲಾಗಿದೆ. ಮಠ-ಮಂದಿರಗಳು ನಡೆಸುತ್ತಿದ್ದರೆ ಅವರಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತೇವೆ. ಈಗಾಗಲೇ ನೂರಕ್ಕೂ ಹೆಚ್ಚು ಗೋಶಾಲೆಗಳಿಗೆ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಸಚಿವರು ಹೇಳಿದರು.
Kshetra Samachara
25/09/2021 03:09 pm