ಕಾಪು: ಬೆಳಪುವಿನಲ್ಲಿ ನೂತನವಾಗಿ ನಿರ್ಮಾಣಗೊಂಡ ಸರಕಾರಿ ಪಾಲಿಟೆಕ್ನಿಕ್ ಕಾಲೇಜು ಉದ್ಘಾಟನಾ ಕಾರ್ಯಕ್ರಮದ ದಿನದಂದೇ ವಿವಿಧ ಬೇಡಿಕೆ ಈಡೇರಿಕೆ ಆಗ್ರಹಿಸಿ ಹಾಗು ಕಾರ್ಯಕ್ರಮ ಸೊರಕೆಯವರನ್ನು ಆಹ್ವಾನನಿಸದೆ ಅಗೌರವ ತೋರಿರುವುದನ್ನು ವಿರೋದಿಸಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಕಾಲೇಜು ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ಘಟನೆ ಶನಿವಾರ ನಡೆಯಿತು.
ಈ ಸಂದರ್ಭ ಮಾತನಾಡಿದ ಬೆಳಪು ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ,ನಾವು ಸುಮಾರು 25 ವರ್ಷಗಳಿಂದ ಈ ಗ್ರಾಮದ ಅಧ್ಯಕ್ಷನಾಗಿ ಅಭಿವೃದ್ಧಿಗಾಗಿ ಹಗಲಿರುಳು ದುಡಿದಿದ್ದೇವೆ.ಅನೇಕ ಯೋಜನೆಗಳನ್ನು ತಂದಿದ್ದೇವೆ.ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದು, ವಿನಯಕುಮಾರ್ ಸೊರಕೆಯವರು ಸಚಿವರಾಗಿದ್ದಾಗ ಅತ್ಯಾಧುನಿಕ ವಿಜ್ಞಾನ ಸಂಶೋಧನಾ ಕೇಂದ್ರಕ್ಕೆ ಮಂಜೂರಾತಿ ದೊರೆತು ಅನುದಾನ ಬಿಡುಗಡೆಯಾಗಿದೆ. ಗ್ರಾಮ ಅಭಿವೃದ್ಧಿಗಾಗಿ ಶ್ರಮಪಟ್ಟ ಸೊರಕೆಯವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿದೆ ಅಗೌರವ ತೋರಿರುವುದು ಗ್ರಾಮಕ್ಕೆ ಅಗೌರವ ತೋರಿದಂತೆ ಎಂದು ಬೇಸರ ವ್ಯಕ್ತಪಡಿಸಿದರು.
ಮಾಜಿ ಸಚಿವ ವಿನಯಕುಮಾರ್ ಸೊರಕೆ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸಿದ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಅವರೊಂದಿಗೆ ಮಾತುಕತೆ ನಡೆಸಿ ಬೇಡಿಕೆಯನ್ನಿಟ್ಟರು.ಈ ಸಂದರ್ಭದಲ್ಲಿ ಅನೇಕ ಕಾಂಗ್ರೆಸ್ ಮುಖಂಡರು,ಕಾರ್ಯಕರ್ತರು ಉಪಸ್ಥಿತರಿದ್ದರು.
Kshetra Samachara
25/09/2021 03:33 pm