ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುರತ್ಕಲ್ ‌ನಲ್ಲಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ಪ್ರಕರಣ.ಬಂಧಿತ ಆರೋಪಿಗಳಿಗೆ ಠಾಣೆಯಲ್ಲೇ ಜಾಮೀನು ಖಂಡಿಸಿ ಕ್ಯಾಂಪಸ್ ಫ್ರಂಟ್ ಪ್ರತಿಭಟನೆ...

ಮಂಗಳೂರು: ಮಂಗಳೂರಿನ ಸುರತ್ಕಲ್ ನಲ್ಲಿ ವಾಹನದಲ್ಲಿ ಹೋಗುತ್ತಿದ್ದ ವೈದ್ಯಕೀಯ ವಿದ್ಯಾರ್ಥಿಗಳನ್ನು ತಡೆದು ನಿಲ್ಲಿಸಿ ಹಲ್ಲೆಗೈದು ಅವಾಚ್ಯ ಶಬ್ದಗಳಿಂದ ನಿಂದಿಸಿ ದಾಂಧಲೆ ನಡೆಸಿದ ಘಟನೆಯನ್ನು ಖಂಡಿಸಿ ಹಾಗೂ ಬಂಧಿತ ಆರೋಪಿಗಳಿಗೆ ಠಾಣೆಯಲ್ಲೇ ಜಾಮೀನು ನೀಡಿದ ಪೊಲೀಸರ ನಡೆಯನ್ನು ಖಂಡಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಮಂಗಳೂರು ಜಿಲ್ಲಾ ಸಮಿತಿ ವತಿಯಿಂದ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಯಿತು. ಮಂಗಳೂರಿನ ಪೊಲೀಸರು ಸಂಘಪರಿವಾರದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ. ಸುರತ್ಕಲ್ ನಲ್ಲಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಸಂಘ ಪರಿವಾರದ ಗೂಂಡಾಗಳ ಪರವಾಗಿ ಪೊಲೀಸರು ನಿಂತಿರುವುದು ಖಂಡನೀಯ ಅಂದರು.

Edited By : Nagesh Gaonkar
Kshetra Samachara

Kshetra Samachara

28/09/2021 08:22 pm

Cinque Terre

7.65 K

Cinque Terre

1